ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ | ಕಟ್ಟಡದ ಸ್ಲ್ಯಾಬ್ ಕುಸಿದು ಕಾರ್ಮಿಕ ಸಾವು

Published 24 ಮಾರ್ಚ್ 2024, 5:52 IST
Last Updated 24 ಮಾರ್ಚ್ 2024, 5:52 IST
ಅಕ್ಷರ ಗಾತ್ರ

ಸಾಗರ (ಮ.ಪ್ರದೇಶ): ಮಧ್ಯಪ್ರದೇಶದ ಸಾಗರ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸ್ಲ್ಯಾಬ್ ಕುಸಿದು ಕಾರ್ಮಿಕ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ಸಂಜೆ ಪಂತ್ ನಗರ ಪ್ರದೇಶದಲ್ಲಿ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಲಖಾನ್ ಎಂದು ಗುರುತಿಸಲಾಗಿದೆ.

ಕಟ್ಟಡದ ಸ್ಲ್ಯಾಬ್ ಕುಸಿದು ಕೆಲವು ಕಾರ್ಮಿಕರು ಸಿಕ್ಕಿಬಿದ್ದ ಬಗ್ಗೆ ಮಾಹಿತಿ ದೊರೆಯಿತು. ತಕ್ಷಣ ಸ್ಥಳಕ್ಕೆ ಧಾವಿಸಿ ಅವರನ್ನು ರಕ್ಷಿಸಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ.

ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT