ಭರೂಚ್: ಗುಜರಾತ್ನ ಭರೂಚ್ ಜಿಲ್ಲೆಯ ದಹೇಜ್ನಲ್ಲಿರುವ ರಾಸಾಯನಿಕ ಘಟಕವೊಂದರಲ್ಲಿ ಸೋರಿಕೆಯಾದ ವಿಷಕಾರಿ ಅನಿಲ ಸೇವಿಸಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ .

ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಗುಜರಾತ್ ಫ್ಲೋರೋಕೆಮಿಕಲ್ಸ್ ಲಿಮಿಟೆಡ್ನ (ಜಿಎಫ್ಎಲ್) ಉತ್ಪಾದನಾ ಘಟಕದಲ್ಲಿ ಪೈಪ್ನಿಂದ ಸೋರಿಕೆಯಾದ ವಿಷಕಾರಿ ಅನಿಲ ಸೇವಿಸಿ ಕಾರ್ಮಿಕರು ಪ್ರಜ್ಞಾಹೀನರಾಗಿದ್ದರು. ಅವರನ್ನು ಭರೂಚ್ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ದಹೇಜ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಎಂ ಪಾಟಿದಾರ್ ಹೇಳಿದ್ದಾರೆ.

ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.