ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ನ (ಡಬ್ಲ್ಯುಎಫ್ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಕ್ರಿಮಿನಲ್ ಮೊಕದ್ದಮೆಗೆ ಸಂಬಂಧಿಸಿದಂತೆ ಜುಲೈ 26ರಂದು ಇಬ್ಬರು ಪೊಲೀಸ್ ಅಧಿಕಾರಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳುವಂತೆ ದೆಹಲಿ ನ್ಯಾಯಾಲಯ ಗುರುವಾರ ಸೂಚಿಸಿದೆ.

ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಿಯಾಂಕಾ ರಜಪೂತ್ ಅವರು, ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಮನ್ಸ್ ಜಾರಿ ಮಾಡಿದ್ದಾರೆ.

ಡಬ್ಲ್ಯುಎಫ್ಐನ ಮಾಜಿ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

ಮೇ ತಿಂಗಳಲ್ಲಿ, ನ್ಯಾಯಾಲಯವು ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ, ಕ್ರಿಮಿನಲ್ ಬೆದರಿಕೆ ಮತ್ತು ಮಹಿಳೆಯರ ಘನತೆಗೆ ಕುಂದು ತಂದ ಆರೋಪಗಳನ್ನು ಹೊರಿಸಿತ್ತು. ಇದರಲ್ಲಿ ತಾನು ನಿರ್ದೋಷಿ ಎಂದು ಬ್ರಿಜ್ ಭೂಷಣ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.