ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಜ್‌ ಭೂಷಣ್‌ ಸಿಂಗ್ ನಿವಾಸದಿಂದ ಡಬ್ಲ್ಯುಎಫ್‌ಐ ಕಚೇರಿ ಸ್ಥಳಾಂತರ

Published 29 ಡಿಸೆಂಬರ್ 2023, 16:32 IST
Last Updated 29 ಡಿಸೆಂಬರ್ 2023, 16:32 IST
ಅಕ್ಷರ ಗಾತ್ರ

ನವದೆಹಲಿ: ನಿಕಟಪೂರ್ವ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್ ಸಿಂಗ್ ಅವರ ನಿವಾಸದಿಂದ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಕಚೇರಿಯನ್ನು ಶುಕ್ರವಾರ ಸ್ಥಳಾಂತರಿಸಲಾಗಿದೆ. ಕ್ರೀಡಾ ಸಚಿವಾಲಯ ಇತ್ತೀಚೆಗೆ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. 

ನವದೆಹಲಿಯ ಹರಿನಗರ ಪ್ರದೇಶದಲ್ಲಿ ಡಬ್ಲ್ಯುಎಫ್‌ಐನ ಹೊಸ ಕಚೇರಿ ಕಾರ್ಯನಿರ್ವಹಿಸಲಿದೆ ಎಂದು ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿವೆ.  

ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ನೇತೃತ್ವದ ಹೊಸ ಆಡಳಿತ ಮಂಡಳಿಯನ್ನು ಡಿ.24ರಂದು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿತ್ತು. ಬ್ರಿಜ್ ಭೂಷಣ್ ಅವರ ನಿವಾಸದಲೇ ಕಚೇರಿ ಕಾರ್ಯನಿರ್ವಹಿಸುತ್ತಿರುವುದರಿಂದ ಕಠಿಣ ಕ್ರಮ ತೆಗೆದುಕೊಳ್ಳಲು ಒಂದು ಕಾರಣ ಎಂದು ಉಲ್ಲೇಖಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT