ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಜ್‌ಭೂಷಣ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ: ಅಮಿತ್ ಶಾ ಭೇಟಿಯಾದ ಕುಸ್ತಿ ಪಟುಗಳು

Published 5 ಜೂನ್ 2023, 6:40 IST
Last Updated 5 ಜೂನ್ 2023, 6:40 IST
ಅಕ್ಷರ ಗಾತ್ರ

ನವದೆಹಲಿ: ಒಲಿಪಿಂಕ್ ಪದಕ ವಿಜೇತ ಕುಸ್ತಿ ಪಟುಗಳಾದ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೊಗಟ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್‌ಭೂಷಣ್ ವಿರುದ್ಧದ ಪ್ರತಿಭಟನೆ ಕುರಿತಂತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಐಎಎನ್‌ಎಸ್ ವರದಿ ಮಾಡಿದೆ.

‘ಬ್ರಿಜ್ ವಿರುದ್ಧದ ಆರೋಪಗಳ ಕುರಿತಂತೆ ಕುಸ್ತಿ ಪಟುಗಳು, ಶಾ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ದೀರ್ಘ ಅವಧಿ ನಡೆದ ಸಭೆಯಲ್ಲಿ ಅಮಿತ್ ಶಾ, ಕುಸ್ತಿ ಪಟುಗಳ ವಾದವನ್ನು ಕೇಳಿಸಿಕೊಂಡರು. ಆದರೆ, ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದು ಕುಸ್ತಿ ಪಟುಗಳು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಏಪ್ರಿಲ್‌ನಿಂದ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ಕುಸ್ತಿ ಪಟುಗಳ ಪ್ರತಿಭಟನೆಯ ನೇತೃತ್ವವನ್ನು ಬಜರಂಗ್, ಸಾಕ್ಷಿ ಮತ್ತು ವಿನೇಶ್ ವಹಿಸಿದ್ದರು. ಅಪ್ರಾಪ್ತೆ ಸೇರಿದಂತೆ ಹಲವು ಕುಸ್ತಿ ಪಟುಗಳಿಗೆ ಬ್ರಿಜ್‌ಭೂಷಣ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬುದು ಪ್ರತಿಭಟನಾನಿರತರ ಆರೋಪವಾಗಿದೆ.

ಜಂತರ್‌ ಮಂತರ್‌ನಿಂದ ಪ್ರತಿಭಟನಾಕಾರರನ್ನು ಹೊರಗೆ ಹಾಕಿರುವ ದೆಹಲಿ ಪೊಲೀಸರು, ಹಲ್ಲೆ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT