ಜಿನಿವಾ: ಲಸಿಕೆಗಳ ಮೇಲಿನ ಬೌದ್ಧಿಕ ಆಸ್ತಿ ಹಕ್ಕುಗಳ ಕಾಯ್ದೆಯಿಂದ ವಿನಾಯಿತಿ ನೀಡುವ ಬಗ್ಗೆ ವಿಶ್ವ ವಾಣಿಜ್ಯ ಸಂಸ್ಥೆ (ಡಬ್ಲ್ಯೂಟಿಒ) ಚಿಂತನೆ ನಡೆಸಿದೆ.

ಈ ಬಗ್ಗೆ ಡಬ್ಲ್ಯೂಟಿಒ ಸದಸ್ಯ ರಾಷ್ಟ್ರಗಳ ರಾಯಭಾರಿಗಳು ಚರ್ಚೆ ನಡೆಸಲಿದ್ದಾರೆ. ಲಸಿಕೆಗಳ ಮೇಲಿನ ಬೌದ್ಧಿಕ ಹಕ್ಕು ಸಡಿಲಗೊಳಿಸುವಂತೆ ಶ್ರೀಮಂತ ರಾಷ್ಟ್ರಗಳ ಮೇಲೆ ಅಭಿವೃದ್ಧಿಶೀಲ ರಾಷ್ಟ್ರಗಳು ಒತ್ತಾಯಿಸುತ್ತಿವೆ. ಇದರಿಂದ, ಕೋವಿಡ್–19 ನಿಯಂತ್ರಿಸಲು ಅನುಕೂಲವಾಗುತ್ತದೆ ಎಂದು ಈ ರಾಷ್ಟ್ರಗಳು ಪ್ರತಿಪಾದಿಸಿವೆ.

ಅಕ್ಟೋಬರ್ ತಿಂಗಳಲ್ಲಿ ಮೊದಲ ಬಾರಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಈ ವಿಷಯವನ್ನು ಪ್ರಸ್ತಾಪಿಸಿದ್ದವು. ಈ ಬೇಡಿಕೆಗೆ ಹಲವು ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿದ್ದವು.

ಆದರೆ, ಹಲವು ದೇಶಗಳಲ್ಲಿನ ಪ್ರಭಾವಿ ಫಾರ್ಮಾಸ್ಯೂಟಿಕಲ್ ಉದ್ಯಮಗಳು ಈ ಪ್ರಸ್ತಾವಕ್ಕೆ ವಿರೋಧ ವ್ಯಕ್ತಪಡಿಸಿವೆ.

ಭಾರತದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿದ ಬಳಿಕ ಬೌದ್ಧಿಕ ಆಸ್ತಿ ಹಕ್ಕು ಕಾಯ್ದೆಯಿಂದ ಲಸಿಕೆಗಳಿಗೆ ವಿನಾಯಿತಿ ನೀಡುವಂತೆ ಒತ್ತಾಯ ಹೆಚ್ಚುತ್ತಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.