ಯಾದಗಿರಿ: ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟಹೆಜ್ಜೆ ಇರಿಸಿದ್ದರು. ಆದರೆ, ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ. ಇದನ್ನು ದೇಶದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ ಎಂದು ಬಿಜೆಪಿ ಮಾಜಿ ಜಿಲ್ಲಾ ಅಧ್ಯಕ್ಷ ಶರಣಭೂಪಾಲ ರೆಡ್ಡಿ ಹೇಳಿದ್ದಾರೆ.

ದಕ್ಷಿಣದ ರಾಜ್ಯಗಳಿಗೆ ಶೇ 50ರಷ್ಟು ಸೀಟುಗಳ ಹೆಚ್ಚಳವನ್ನು ಖಾತರಿಪಡಿಸುವ ಅಧಿಕೃತ ತಿದ್ದುಪಡಿ ಕರಿತು ಗೃಹ ಸಚಿವ ಅಮಿತ್ ಶಾ ಅವರು ಭರವಸೆ ನೀಡಿದ್ದರು. ಆದರೂ ವಿರೋಧ ಪಕ್ಷಗಳು ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ರಾಷ್ಟ್ರದ ಹಿತಾಸಕ್ತಿಯನ್ನು ಬಲಿ ಕೊಟ್ಟಿವೆ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಹೆಣ್ಣು ಮಕ್ಕಳಿಗೂ ಹಕ್ಕಿದೆ ಎಂದು ಭಾಷಣ ಮಾಡುವ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳ ಅಸಲಿ ಮುಖ ಬಯಲಾಗಿದೆ. ಮಹಿಳಾ ಮೀಸಲಾತಿ ಮಸೂದೆ ಇವರಿಗೆ ಅಷ್ಟಕ್ಕಷ್ಟೆ. ಬರಿ ತಮ್ಮ ಮನೆಯ ಹೆಣ್ಣು ಮಕ್ಕಳು ಅಧಿಕಾರಕ್ಕೆ ಬಂದರೆ ಸಾಕು. ದೇಶದಲ್ಲಿರುವ 70 ಕೋಟಿ ಮಹಿಳೆಯರು ಕಣ್ಣಿಗೆ ಕಾಣದಂತಾಗಿದೆ ಎಂದಿದ್ದಾರೆ.

ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ದೇಶದ ಜನಸಂಖ್ಯೆ 140 ಕೋಟಿ ದಾಟಿದರೂ ಕಾಂಗ್ರೆಸ್ಸಿಗರು ಇನ್ನು 50 ವರ್ಷಗಳ ಹಳೇ ಲೆಕ್ಕಚಾರ ಇರಿಸಿಕೊಂಡಿದ್ದಾರೆ. ಮಹಿಳೆಯರಿಗೆ ಪ್ರಾತಿನಿಧ್ಯ ಕೊಡಲು ಮನಸ್ಸಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-30-680529279

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.