ಯಾದಗಿರಿ: ‘ಮಹಿಳೆಯರ ಪರ ಎಂದು ಹೇಳಿಕೊಳ್ಳುತ್ತಲೇ ಮಹಿಳಾ ಮೀಸಲಾತಿ ವಿರೋಧಿಸುವ ಮೂಲಕ ಕಾಂಗ್ರೆಸ್ ದ್ವಂದ್ವ ನೀತಿಯನ್ನು ತೋರಿಸಿದೆ’ ಎಂದು ಬಿಜೆಪಿ ನಾಯಕಿ ನಾಗರತ್ನಾ ಕುಪ್ಪಿ ಟೀಕಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ‘ಕಾಂಗ್ರೆಸ್ನ ಮಹಿಳಾ ಸಂಸದರೂ ಸಹ ವಿರೋಧ ವ್ಯಕ್ತಪಡಿಸಿದ್ದು ಆಶ್ಚರ್ಯಕರ. ಪ್ರಧಾನಮಂತ್ರಿ ಮೋದಿಯವರು ಮಹಿಳಾ ಸಬಲೀಕರಣಕ್ಕೆಂದು ಮಂಡಿಸಿದ್ದರು. ಆದರೆ, ವಿರೋಧ ಪಕ್ಷಗಳು ಇದನ್ನು ವಿರೋಧಿಸಿದ್ದರಿಂದ ದೇಶದ ಮಹಿಳೆಯರ ನಿರೀಕ್ಷೆಗೆ ಧಕ್ಕೆಯಾಗಿದೆ’ ಎಂದು ಹೇಳಿದ್ದಾರೆ

‘ಈ ಕಾಯ್ದೆಯಿಂದ ಕೇವಲ ರಾಜಕೀಯ ಮನೆತನಗಳ ಮಹಿಳೆಯರಿಗೆ ಮಾತ್ರ ಅವಕಾಶ ಸೀಮಿತವಾಗದೆ, ಎಲ್ಲಾ ಮನೆಗಳ ಮಹಿಳೆಯರು ಸ್ವಸಾಮರ್ಥ್ಯದಿಂದ ರಾಜಕೀಯದಲ್ಲಿ ಮುನ್ನಡೆಯುವ ಅವಕಾಶ ಸಿಗುತ್ತಿತ್ತು. ಆದರೆ, ಈಗ ಹಿನ್ನೆಡೆಯಾಗಿದೆ. ದೇಶದ ಮಹಿಳೆಯರು ಕಾಂಗ್ರೆಸ್ ಅನ್ನು ಕ್ಷಮಿಸುವುದಿಲ್ಲ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಈ ಕುರಿತು ದೇಶಾದ್ಯಂತ ಜಾಗೃತಿ ಮೂಡಿಸಿ, ಹೋರಾಟ ರೂಪಿಸಲಾಗುವುದು. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಈ ಕಾಯ್ದೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯಿದೆ’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-30-1028499785

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.