ಯಲಬುರ್ಗಾ: ‘ಗೋಮಾತೆಯು ಭೂಮಾತೆ ಪ್ರತೀಕವಾಗಿದ್ದು, ಸರ್ಕಾರ ಕೂಡಲೇ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ ಸಂರಕ್ಷಣೆಗೆ ಮುಂದಾಗಬೇಕು’ ಎಂದು ಶ್ರೀಧರಮುರಡಿ ಹಿರೇಮಠದ ಪೀಠಾಧಿಕಾರಿ ಬಸವಲಿಂಗೇಶ್ವರ ಸ್ವಾಮೀಜಿ ಆಗ್ರಹಿಸಿದರು.

ಪಟ್ಟಣದ ರಾಣಿ ಚನ್ನಮ್ಮ ವೃತ್ತದ ಬಳಿ ಗೋಮಾತೆ ಗೌರವ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಕಾಮಧೇನು ಎಂದೇ ಕರೆಯಿಸಿಕೊಳ್ಳುವ ಗೋವುಗಳನ್ನು ಪ್ರಾಚೀನ ಕಾಲದಿಂದಲೂ ಪೂಜ್ಯನೀಯ ಭಾವದಿಂದ ಕಾಣುತ್ತಿದ್ದೇವೆ ಹಾಗೂ ಇಂದಿಗೂ ಪೂಜಿಸುತ್ತಿದ್ದೇವೆ. ಭಾರತೀಯ ಸನಾತನ ಹಿಂದೂ ಧರ್ಮದ ಆರಾಧ್ಯ ದೈವವಾಗಿಯೇ ಪರಿಗಣಿಸಲ್ಪಟ್ಟಿರುವ ಗೋವು ಅವಸಾನದ ಅಂಚಿನತ್ತ ಸಾಗಿವೆ. ಇವುಗಳನ್ನು ಸಂರಕ್ಷಿಸುವ ಕೆಲಸ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರಾಣಿ ಪ್ರಿಯರ ಹಾಗೂ ಗೋವು ಸಂರಕ್ಷಕರ ಕೋರಿಕೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪ್ರಾಣಿಯನ್ನಾಗಿ ಮಾಡಬೇಕಾಗಿದೆ’ ಎಂದು ಹೇಳಿದರು.

ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶಗೌಡ ಶಿವನಗೌಡ ಮಾತನಾಡಿ, ‘ಗೋವುಗಳ ಹತ್ತೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ಯೋಜನೆ ರೂಪಿಸಿ ಗೋವುಗಳ ಸಂರಕ್ಷಣೆಗೆ ಮುಂದಾಗಬೇಕು’ ಎಂದು ಸಲಹೆ ನೀಡಿದರು.

ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ, ವೀರನಗೌಡ ಬನ್ನಪ್ಪಗೌಡ್ರ, ಯೋಗೇಶ ರಾಜಪುರೋಹಿತ, ಅಮರೇಶ ಹುಬ್ಬಳ್ಳಿ ಸೇರಿ ಅನೇಕರು ಮಾತನಾಡಿದರು. ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಸಹಿ ಸಂಗ್ರಹದ ಮೂಲಕ ಒತ್ತಾಯಿಸಿದರು. ಅನೇಕ ಗಣ್ಯರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-35-1837282921

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.