ನವದೆಹಲಿ: ಉತ್ತರ ಪ್ರದೇಶದ ಮಥುರಾದಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ಯಮುನಾ ಎಕ್ಸ್ಪ್ರೆಸ್ ಹೈವೆಯಲ್ಲಿ 7 ಬಸ್ಗಳು ಮತ್ತು ಮೂರು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, 13 ಮಂದಿ ಮೃತಪಟ್ಟಿದ್ದಾರೆ.

ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆಯಿಂದ ಈ ಅವಘಡ ಸಂಭವಿಸಿದೆ. ಈ ಸಂದರ್ಭ ಹಲವು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ.

ಅಪಘಡದ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್, ಪ್ರದೇಶದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಬಂದ್ ಆಗಿರುವ ಹೆದ್ದಾರಿಯನ್ನು ತೆರವು ಮಾಡಿ ಸಿಲುಕಿರುವ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಘಟನೆಯಲ್ಲಿ ಕನಿಷ್ಠ 4 ಮಂದಿ ಮೃತಪಟ್ಟಿದ್ದು, 35ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. 7 ಬಸ್ ಮತ್ತು 3 ಬಸ್ ನಡುವೆ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ಘಟನೆ ಕುರಿತಾದ ಮಾಹಿತಿ ಅಗ್ನಿಶಾಮಕ ದಳಕ್ಕೆ ಬರುತ್ತಿದ್ದಂತೆ ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕಾರ್ಯಾಚರನೆ ನಡೆಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ. 25ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.