ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಪ್ರವಾಹದ ಆತಂಕ

Published : 13 ಆಗಸ್ಟ್ 2024, 11:03 IST
Last Updated : 13 ಆಗಸ್ಟ್ 2024, 11:03 IST
ಫಾಲೋ ಮಾಡಿ
Comments

ನವದೆಹಲಿ: ಹರಿಯಾಣದ ಹಥಿನಿಕುಂಡ ಬ್ಯಾರೇಜ್‌ನಿಂದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಯಮುನಾ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಪರಿಣಾಮ ದೆಹಲಿಯಲ್ಲಿ ಪ್ರವಾಹದ ಆತಂಕ ಎದುರಾಗಿದೆ.

‘ಯಮುನಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ಪ್ರವಾಹ ಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಪ್ರವಾಹ ಎದುರಿಸಲು ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ’ ಎಂದು ದೆಹಲಿಯ ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಸಚಿವ ಸೌರಭ್‌ ಭಾರದ್ವಾಜ್ ಮಂಗಳವಾರ ತಿಳಿಸಿದ್ದಾರೆ. 

‘ಯಮುನಾ ನದಿಯ ಅಪಾಯ ಮಟ್ಟ 204.5 ಮೀಟರ್‌ ಆಗಿದೆ. ಆದರೆ ಇಂದು ಹಳೆಯ ರೈಲ್ವೆ ಸೇತುವೆ ಬಳಿ ಅಪಾಯ ಮಟ್ಟ ಮೀರಿ ನೀರಿನ ಹರಿವು 204.35 ಮೀಟರ್‌ ತಲುಪಿದೆ. ಹಥಿನಿಕುಂಡ ಬ್ಯಾರೇಜ್‌ನಿಂದ 10–13 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗಿದೆ’ ಎಂದು ಅವರು ತಿಳಿಸಿದರು.

‘ನದಿ ಪಾತ್ರದ ಜನಗಳಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಪ್ರವಾಹ ಸ್ಥಿತಿ ನಿರ್ಮಾಣವಾದರೆ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲು ರಕ್ಷಣಾ ತಂಡ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ’ ಎಂದೂ ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT