ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ

Last Updated 27 ಜೂನ್ 2022, 9:33 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ಮುಖಂಡ ಶರದ್ ಪವಾರ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ಸೇರಿದಂತೆ ಹಲವು ನಾಯಕರು ಹಾಜರಿದ್ದರು.

ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರ, ಟಿಆರ್‌ಎಸ್ ನಾಯಕ ಕೆ.ಟಿ. ರಾಮ ರಾವ್ ಸಹ ಉಪಸ್ಥಿತರಿದ್ದರು.

ರಾಷ್ಟ್ರಪತಿ ಚುನಾವಣೆಯಲ್ಲಿ ಚುನಾವಣಾ ಅಧಿಕಾರಿ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ಸಿನ್ಹಾ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಬಳಿಕ ಸಿನ್ಹಾ ಅವರು ಸಂಸತ್ತಿನ ಆವರಣದಲ್ಲಿ ಮಹಾತ್ಮ ಗಾಂಧಿ ಹಾಗೂ ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ನಮನ ಸಲ್ಲಿಸಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿದ್ದ ಸಿನ್ಹಾ ಅವರನ್ನು ಜೂನ್ 21ರಂದು ವಿರೋಧ ಪಕ್ಷಗಳ ಸಭೆಯಲ್ಲಿ ಅವಿರೋಧವಾಗಿ ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಯಿತು.

ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಕಳೆದ ವಾರ ನಾಮಪತ್ರ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT