ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ ಅಪರಾಧಿ: ಮೇ 25ಕ್ಕೆ ಶಿಕ್ಷೆ ಪ್ರಕಟ

Last Updated 19 ಮೇ 2022, 9:40 IST
ಅಕ್ಷರ ಗಾತ್ರ

ನವದೆಹಲಿ: 2017ರಲ್ಲಿ ಕಾಶ್ಮೀರ ಕಣಿವೆಯಲ್ಲಿ ಅಸ್ಥಿರತೆಗೆ ಕಾರಣವಾಗಿದ್ದ ಹಾಗೂ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅಪರಾಧಿ ಎಂದು ದೆಹಲಿ ವಿಶೇಷ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.

ಇದರಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಮಾಡಿರುವ ಆರೋಪಗಳೂ ಸೇರಿವೆ. ಯಾಸಿನ್ ಮಲಿಕ್‌ಗೆ ಶಿಕ್ಷೆಯನ್ನು ಮೇ 25 ರಂದು ಪ್ರಕಟ ಮಾಡುವುದಾಗಿ ನ್ಯಾಯಾಲಯ ತಿಳಿಸಿದೆ.

ಸೆಕ್ಷನ್ 16 (ಭಯೋತ್ಪಾದನೆ), 17 (ಭಯೋತ್ಪಾದನೆಗೆ ನಿಧಿ ಸಂಗ್ರಹ), 18 (ಭಯೋತ್ಪಾದಕ ಕೃತ್ಯಕ್ಕೆ ಸಂಚು) ಹಾಗೂ 20 (ಭಯೋತ್ಪಾದಕ ಸಂಘಟನೆಯ ಸದಸ್ಯನಾಗಿರುವುದು), ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಸೆಕ್ಷನ್ 120–ಬಿ (ಅಪರಾಧ ಸಂಚು) ಮತ್ತು ಭಾರತೀಯ ದಂಡಸಂಹಿತೆಯ 124–ಎ (ದೇಶದ್ರೋಹ) ಪ್ರಕರಣಗಳು ಯಾಸಿನ್ ಮೇಲಿದ್ದವು. ಇವುಗಳ ವಿರುದ್ಧ ವಾದ ಮಂಡಿಸಲು ಬಯಸುವುದಿಲ್ಲ ಎಂದು ಮಲಿಕ್ ಮೇ 11 ರಂದ ನ್ಯಾಯಾಲಯದ ಮುಂದೆ ಹೇಳಿದ್ದ. ತನ್ನ ತಪ್ಪುಗಳನ್ನು ಒಪ್ಪಿಕೊಂಡಿದ್ದೇನೆ ಎಂದು ಹೇಳಿದ್ದ.

2019 ರಿಂದಲೂ ದೆಹಲಿಯ ತಿಹಾರ್ ಜೈಲಿನಲ್ಲಿ ಇರುವ ಮಲಿಕ್‌ ವಿರುದ್ಧದ ಆರೋಪಗಳಿಗೆ ಗರಿಷ್ಠ ಜೀವಾವಧಿ ಶಿಕ್ಷೆ ನೀಡಬಹುದಾಗಿದೆ.

ಫಾರೂಕ್ ಅಹ್ಮದ್ ಧರ್, ಶಬ್ಬೀರ್ ಶಾ ಸೇರಿದಂತೆ ಅನೇಕ ಪ್ರತ್ಯೇಕತಾವಾದಿ ನಾಯಕರ ವಿರುದ್ಧವೂ ದೋಷಾರೋಪ ಹೊರಿಸಲಾಗಿತ್ತು. ಲಷ್ಕರ್ ಎ ತಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಹಾಗೂ ಹಿಜ್ಬುಲ್ ಮುಜಾಹಿದೀನ್ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್ ವಿರುದ್ಧವೂ ಚಾರ್ಜ್‌ಸೀಟ್ ಸಲ್ಲಿಕೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT