ನವದೆಹಲಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಜಲಾಲ್ಪುರ ಗ್ರಾಮದ ಐತಿಹಾಸಿಕ ಯಲ್ಲಮ್ಮ ದೇವಿ ದೇಗುಲವನ್ನು ಖಾಸಗಿ ಆಸ್ತಿ ಎಂದು ತೀರ್ಮಾನಿಸಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.

ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಎಂ.ಎಂ.ಸುಂದರೇಶ್ ಮತ್ತು ಕೋಟೇಶ್ವರ ಸಿಂಗ್ ಅವರನ್ನು ಒಳಗೊಂಡ ಪೀಠವು, ‘ಸಾರ್ವಜನಿಕರ ಪೂಜೆಗೆ ಮುಕ್ತವಾಗಿರುವ ಪ್ರಾಚೀನ ದೇವಾಲಯಗಳು ಸಾಮಾನ್ಯವಾಗಿ ಸಾರ್ವಜನಿಕ ದೇಗುಲಗಳು ಎಂಬ ಭಾವನೆಯಿದೆ. ಇದನ್ನು ನಿರಾಕರಿಸಲು ಬಲವಾದ ಪುರಾವೆಗಳ ಅಗತ್ಯವಿದೆ’ ಎಂದು ಹೇಳಿತು.

ಈ ಕುರಿತು ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಸಮಗ್ರವಾಗಿ ಪರಿಶೀಲಿಸಿ ಹೊಸದಾಗಿ ನಿರ್ಧರಿಸುವಂತೆ ಪೀಠವು ಹೈಕೋರ್ಟ್ಗೆ ನಿರ್ದೇಶಿಸಿ, ಅರ್ಜಿಯನ್ನು ಹಿಂದಿರುಗಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.