ಕುಶಿನಗರ: ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಫಾಜಿಲ್ ನಗರವನ್ನು ಜೈನ ತೀರ್ಥಂಕರ ಭಗವಾನ್ ಮಹಾವೀರರ ಗೌರವಾರ್ಥವಾಗಿ 'ಪಾವಗಡ' ಎಂದು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಘೋಷಿಸಿದ್ದಾರೆ.

ಪಟ್ಟಣದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಈ ಘೋಷಣೆ ಮಾಡಿದ ಅವರು, ₹424 ಕೋಟಿಗೂ ಹೆಚ್ಚು ಮೌಲ್ಯದ 278 ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ಇದೇ ವೇಳೆ ವಿವಿಧ ಸರ್ಕಾರಿ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಪ್ರಮಾಣಪತ್ರ, ಮಂಜೂರಾತಿ ಪತ್ರ ಮತ್ತು ಚೆಕ್ಗಳನ್ನು ವಿತರಿಸಿದರು.

‘ಮರುನಾಮಕರಣವು ಭಗವಾನ್ ಮಹಾವೀರ ಮತ್ತು ಈ ಪ್ರದೇಶಕ್ಕೆ ಸಂಬಂಧಿಸಿದ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವವನ್ನು ಗುರುತಿಸುವ ಉದ್ದೇಶವನ್ನು ಹೊಂದಿದೆ’ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದಾದ್ಯಂತ ಅಭಿವೃದ್ಧಿಯನ್ನು ಉತ್ತೇಜಿಸುವ ಜೊತೆಗೆ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.