ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶನಿವಾರ ಲಖನೌದ ಜನಭವನದಲ್ಲಿ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರನ್ನು ಭೇಟಿಯಾಗಿದ್ದು, ಭಾನುವಾರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಯೋಗಿ ಆದಿತ್ಯನಾಥ ಸಂಪುಟದ ವಿಸ್ತರಣೆ ಭಾನುವಾರ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಜನಭವನದಲ್ಲಿ ಹೊಸ ಸಚಿವರ ಪ್ರಯಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಮೂಲಗಳು ಪಿಟಿಐಗೆ ದೃಢಪಡಿಸಿವೆ.

ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ. ಆದರೆ ಸರ್ಕಾರದಿಂದ ಈವರೆಗೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ.

ಸಂಪುಟ ವಿಸ್ತರಣೆ ಬಗ್ಗೆ ದೀರ್ಘಕಾಲದ ಊಹಾಪೋಹಗಳ ನಡುವೆ ಈ ಮಹತ್ವದ ಬೆಳವಣಿಗೆ ನಡೆದಿದೆ. ಪಂಚರಾಜ್ಯ ಚುನಾವಣೆಗಳ ಬೆನ್ನಲ್ಲೇ ರಾಜ್ಯದಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಸಚಿವ ಸಂಪುಟದ ಗರಿಷ್ಠ ಸಂಖ್ಯೆ 60 ಆಗಿದೆ. ಸದ್ಯ ಆರು ಸ್ಥಾನಗಳು ಖಾಲಿ ಇವೆ.

ರಾಜ್ಯದಲ್ಲಿ 2027ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಸಂಪುಟದ ವಿಸ್ತರಣೆಯು ಜಾತಿ ಹಾಗೂ ಪ್ರಾದೇಶಿಕ ಸಮೀಕರಣಗಳ ಮೇಲೆ ಪರಿಣಾಮ ಬೀರಬಹುದು ಎಂದು ರಾಜಕೀಯ ವಿಶ್ಲೇಷಕರು ಅಂದಾಜಿಸಿದ್ದಾರೆ.

ಮತ್ತೊಂದೆಡೆ ಯೋಗಿ ಆದಿತ್ಯನಾಥ ಸರ್ಕಾರದ ಸಂಪುಟ ವಿಸ್ತರಣೆಯ ಕುರಿತು ಸಮಾಜವಾದಿ ಪಕ್ಷದ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತರಾಟೆಗೆ ತೆಗೆದುಕೊಂಡಿದ್ದು, 'ದೆಹಲಿಯಿಂದ ಸ್ಲಿಪ್ ಬಂದಿದೆಯೇ' ಎಂದು ಪ್ರಶ್ನಿಸಿದ್ದಾರೆ.
.ಯೋಗಿ ಆದಿತ್ಯನಾಥ ಭೇಟಿಯಾದ ಅದಾನಿ: 1 ಟ್ರಿಲಿಯನ್ ಡಾಲರ್ ಆರ್ಥಿಕ ಗುರಿಗೆ ಬೆಂಬಲ.ಬಿಹಾರ-ಯುಪಿ ನಡುವೆ ರಾಮ-ಸೀತೆಯಂತೆ ಮುರಿಯಲಾಗದ ಬಾಂಧವ್ಯವಿದೆ: ಯೋಗಿ ಆದಿತ್ಯನಾಥ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.