ಲಖನೌ: ‘ರಾಜ್ಯದಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಈ ರೀತಿಯ ಭಯ ಹುಟ್ಟಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದು ಮತ್ತು ಆಮ್ಲಜನಕ ಕೊರತೆಯಾಗುತ್ತಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಈ ಹೇಳಿಕೆ ನೀಡಿದ್ದಾರೆ.

ಓದಿ:ವರನಿಗೆ ಸೋಂಕು: ಕೇರಳದ ಆಲಪ್ಪುಳದಲ್ಲಿ ಕೋವಿಡ್ ವಾರ್ಡ್ನಲ್ಲೇ ಮದುವೆ!

‘ಸಾಮಾಜಿಕ ಮಾಧ್ಯಮಗಳ ಮೂಲಕ ತಪ್ಪು ದಾರಿಗೆಳೆಯುವ ಸಂದೇಶಗಳನ್ನು ಬಿತ್ತರಿಸಲಾಗುತ್ತಿದೆ. ಇಂತಹ ಜನರನ್ನು ಗುರುತಿಸುವ ಕಾರ್ಯ ನಡೆಯಬೇಕಾಗಿದೆ. ಪ್ರಸ್ತುತ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಜನರ ತಾಳ್ಮೆಯನ್ನು ಪರೀಕ್ಷಿಸಲಾಗುತ್ತಿದೆ’ ಎಂದು ರಾಮಚರಿತ ಮಾನಸದಲ್ಲಿನ ಕೆಲವು ಅಂಶಗಳನ್ನು ಅವರು ಉಲ್ಲೇಖಿಸಿದ್ದಾರೆ.

‘ಕೋವಿಡ್–19ನಿಂದ ಸಾವಿಗೀಡಾಗುವವರ ಅಂತ್ಯಕ್ರಿಯೆ ನಡೆಸಲು ಯಾವುದೇ ರೀತಿ ಶುಲ್ಕ ಪಡೆಯುವುದಿಲ್ಲ. ರಾಜ್ಯದಲ್ಲಿನ ಆಮ್ಲಜನಕ ಲಭ್ಯತೆಯ ಬಗ್ಗೆ ಲೆಕ್ಕಪರಿಶೋಧನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಆಮ್ಲಜನಕದ ಕೊರತೆ ಇಲ್ಲ. ಆದರೆ,ಕೆಲವರು ಕಾಳಸಂತೆಯಲ್ಲಿ ಆಮ್ಲಜನಕ ಮಾರಾಟ ಮಾಡುವ ಪ್ರಯತ್ನ ನಡೆಯುತ್ತಿದೆ’ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.