ವಾರಾಣಸಿ: ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ಎರಡು ಬಾರಿ ತೆರೆಯಲು ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ವಾರಾಣಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಅದ್ವಾನ್ ಎಂದು ಗುರುತಿಸಲಾಗಿದೆ. ಈತ ಶನಿವಾರ ರಾತ್ರಿ ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ (6E 185) ವಿಮಾನದ ಪ್ರಯಾಣಿಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನವು ಬೆಂಗಳೂರಿನಿಂದ ಟೇಕಾಫ್ ಆದ ಕೂಡಲೇ ಅದ್ವಾನ್ ಏಕಾಏಕಿ ವಿಮಾನದ ಬಾಗಿಲು ತೆರೆಯಲು ಮುಂದಾಗಿದ್ದಾನೆ. ಇದನ್ನು ಗಮನಿಸಿದ ವಿಮಾನದ ಸಿಬ್ಬಂದಿ ಆತನನ್ನು ತಡೆದು, ಕೂರಿಸಿದ್ದಾರೆ. ಬಳಿಕ ಮತ್ತೆ ವಿಮಾನವು ವಾರಾಣಸಿಯಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಮತ್ತೆ ಬಾಗಿಲು ತೆರೆಯಲು ಮುಂದಾಗಿದ್ದ. ಈ ವೇಳೆ ಸಿಬ್ಬಂದಿ ಆತನನ್ನು ಹಿಡಿದು ನಿಯಂತ್ರಿಸಿದ್ದಾರೆ.

ಬಂಧನದ ನಂತರ ಆರೋಪಿಯು ತಾನು ವಿಮಾನದಲ್ಲಿ ಮೊದಲ ಬಾರಿಗೆ ಪ್ರಯಾಣಿಸುತ್ತಿದ್ದು, ಗಾಬರಿಗೊಂಡಿದ್ದೆ ಎಂದು ಪೊಲೀಸ್ ವಿಚಾರಣೆ ವೇಳೆ ಹೇಳಿದ್ದಾನೆ. ಸದ್ಯ ಇಂಡಿಗೋ ನೀಡಿದ ದೂರಿನ ಮೇರೆಗೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.