ನವದೆಹಲಿ: ‘ಕೇಂದ್ರ ಸರ್ಕಾರವು ಅಮೆರಿಕದೊಂದಿಗೆ ಮಾಡಿಕೊಂಡಿರುವ ವ್ಯಾಪಾರ ಒಪ್ಪಂದದಿಂದ ಭಾರತಕ್ಕೆ ಕೇಡಾಗಲಿದೆ’ ಎಂದು ಆರೋಪಿಸಿರುವ ಯುವ ಕಾಂಗ್ರೆಸ್, ಮಾರ್ಚ್ 16ರಂದು ದೆಹಲಿಯ ಜಂತರ್ ಮಂತರ್ನಲ್ಲಿ ‘ಸಂಸದರ ಘೇರಾವ್’ ಪ್ರತಿಭಟನೆ ನಡೆಸಲಿದೆ ಎಂದು ಶನಿವಾರ ಘೋಷಿಸಿದೆ.

‘ದೇಶದಾದ್ಯಂತ ಇರುವ ಕಾಂಗ್ರೆಸ್ನ ಯುವ ಘಟಕದ ಎಲ್ಲ ಕಾರ್ಯಕರ್ತರು ಬರಲಿದ್ದಾರೆ. ನಮ್ಮ ರಾಷ್ಟ್ರೀಯ ಅಧ್ಯಕ್ಷ ಉದಯ್ ಬಾನು ಚಿಬ್ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಯುವ ಕಾಂಗ್ರೆಸ್ ದೆಹಲಿ ಘಟಕದ ಅಧ್ಯಕ್ಷ ಅಕ್ಷಯ್ ಲಾಖ್ರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಈ ವ್ಯಾಪಾರ ಒಪ್ಪಂದದಿಂದಾಗಿ ದೇಶದ ರೈತರು, ಜವಳಿ ಕ್ಷೇತ್ರಕ್ಕೆ ಹೊಡೆತ ಬೀಳಲಿದೆ. ಜೊತೆಗೆ, ದೇಶದ ದತ್ತಾಂಶ ಭದ್ರತೆಗೆ ಕೂಡ ಈ ಒಪ್ಪಂದವು ಮಾರಕವಾಗಲಿದೆ. ಈ ಎಲ್ಲ ಅಂಶಗಳನ್ನು ಪ್ರತಿಭಟನೆ ಮೂಲಕ ಜನರಿಗೆ ತಿಳಿಸುವುದು ನಮ್ಮ ಉದ್ದೇಶ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.