ಹೈದರಾಬಾದ್: ಬಿಎಸ್ಸಿ ವಿದ್ಯಾರ್ಥಿನಿ ಹಾಗೂ ಯೂಟ್ಯೂಬರ್ ಬೋನು ಕೋಮಲಿ (21) ಸೋಮವಾರ (ಫೆ.23) ತನ್ನ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈಕೆ ಸಾವಿಗೂ ಮೊದಲು ಕುವೈತ್ನಲ್ಲಿರುವ ತನ್ನ ತಾಯಿಗೆ ‘ಐ ಲವ್ ಯೂ ಸೋ ಮಚ್ ಅಮ್ಮ’ ಎಂದು ಸಂದೇಶ ಕಳುಹಿಸಿದ್ದರು ಎಂದು ವರದಿಯಾಗಿದೆ.

ಆಂಧ್ರಪ್ರದೇಶದ ವಿಶಾಖಪಟ್ಟಣಂ ನಿವಾಸಿಯಾದ ಕೋಮಲಿ ಅವರು ಹೈದರಾಬಾದ್ನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ಸುಮಾರು 11 ತಿಂಗಳಿನಿಂದ ಅಪಾರ್ಟ್ಮೆಂಟ್ವೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಅಲ್ಲದೇ ತಮ್ಮ ಜೀವನಶೈಲಿ ಬಗ್ಗೆ ಯೂಟ್ಯೂಬ್ನಲ್ಲಿ ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದರು.
.ಈ ಹುಡುಗನ ನಗು ಅವನ ಜೀವನವನ್ನೇ ಬದಲಿಸಿತು: ಮೀಮ್ ಹಿಂದಿದೆ ಸ್ಫೂರ್ತಿದಾಯಕ ಕಥೆ.ಡೆಲ್ಟಾ ಬೀಚ್ನಲ್ಲಿ ಮಗುಚಿ ಬಿದ್ದ ದೋಣಿ: ಯೂಟ್ಯೂಬರ್ ನಿಶಾ, ಮಧು ಗೌಡ ಗೆಳತಿ ಸಾವು.
ಸಾವಿಗೂ ಮುನ್ನ ತಾಯಿಗೆ ಸಂದೇಶ

ಪೊಲೀಸರ ಮಾಹಿತಿಯ ಪ್ರಕಾರ, ಕೋಮಲಿ ಸೋಮವಾರ ಮುಂಜಾನೆ ಕುವೈತ್ನಲ್ಲಿ ಕೆಲಸ ಮಾಡುತ್ತಿರುವ ತಮ್ಮ ತಾಯಿ ಬಿ. ಸತ್ಯ ವರಲಕ್ಷ್ಮಿಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿದ್ದಾರೆ.

ಅದರಲ್ಲಿ ‘ಐ ಲವ್ ಯು ಸೋ ಮಚ್ ಅಮ್ಮ, ತಮ್ಮನನ್ನು ಚೆನ್ನಾಗಿ ನೋಡಿಕೋ’ ಎಂದು ಸಂದೇಶ ಕಳುಹಿಸಿದ್ದಾರೆ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ತಾಯಿ ಸತತವಾಗಿ ಕರೆ ಮಾಡಿದರೂ ಆಕೆ ಸ್ವೀಕರಿಸಿಲ್ಲ. ಗಾಬರಿಗೊಂಡ ತಾಯಿ, ತಕ್ಷಣವೇ ಕೋಮಲಿಯ ಸ್ನೇಹಿತರೊಬ್ಬರಿಗೆ ಕರೆ ಮಾಡಿ ಫ್ಲಾಟ್ ಬಳಿ ಹೋಗಿ ನೋಡುವಂತೆ ತಿಳಿಸಿದ್ದಾರೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ನೇಹಿತ ಫ್ಲಾಟ್ಗೆ ಹೋಗಿ ಎಷ್ಟೇ ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಬಂದಿಲ್ಲ. ಕೊನೆಗೆ ಬಾಗಿಲಿನ ಒಡೆದು ಒಳನುಗ್ಗಿ ನೋಡಿದಾಗ, ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಇದಕ್ಕೂ ಮೊದಲು ಕೋಮಲಿ ಅವರು ಸುಮಾರು 6 ತಿಂಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಪೊಲೀಸ್ ಅಧಿಕಾರಿ ಸಿ.ಹೆಚ್ ವೆಂಕಣ್ಣ ತಿಳಿಸಿದ್ದಾರೆ.

ಸದ್ಯ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕೋಮಲಿಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಜೊತೆಗೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ಎನ್ಡಿಟಿವಿ ವಾಹಿನಿ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.