ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ, ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ ವೈ.ಎಸ್‌ ಶರ್ಮಿಳಾ

Published 4 ಜನವರಿ 2024, 6:10 IST
Last Updated 4 ಜನವರಿ 2024, 6:10 IST
ಅಕ್ಷರ ಗಾತ್ರ

ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್ ಜಗನ್‌ಮೋಹನ್‌ ರೆಡ್ಡಿ ಅವರ ಸಹೋದರಿ ವೈ.ಎಸ್ ಶರ್ಮಿಳಾ ಅವರು ಇಂದು (ಜ. 4) ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಹಾಗೂ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಇಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.

ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅವರು, ‘ವೈಎಸ್‌ಆರ್ ತೆಲಂಗಾಣ ಪಕ್ಷನ್ನು ಕಾಂಗ್ರೆಸ್‌ ಪಕ್ಷದೊಂದಿಗೆ ವಿಲೀನಗೊಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ವೈಎಸ್ಆರ್ ತೆಲಂಗಾಣ ಪಕ್ಷವು ಇಂದಿನಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಭಾಗವಾಗುತ್ತಿರುವುದು ನನಗೆ ಸಂತೋಷ ಉಂಟು ಮಾಡಿದೆ’ ಎಂದು ಹೇಳಿದರು.

ವೈ.ಎಸ್ ಶರ್ಮಿಳಾ ಅವರು ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್‌ ರಾಜಶೇಖರ ರೆಡ್ಡಿ ಅವರ ಪುತ್ರಿ ಹಾಗೂ ಆಂಧ್ರಪ್ರದೇಶದ ಈಗಿನ ಮುಖ್ಯಮಂತ್ರಿ ವೈ.ಎಸ್ ಜಗನ್‌ ಮೋಹನ್‌ ರೆಡ್ಡಿ ಅವರ ಕಿರಿಯ ಸಹೋದರಿ.

ಇತ್ತೀಚೆಗೆ ನಡೆದ ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶರ್ಮಿಳಾ ಬೆಂಬಲ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT