ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ಚುನಾವಣೆ: ಕಲ್ಯಾಣ ಪಿಂಚಣಿ ಹೆಚ್ಚಳಕ್ಕೆ ಪ್ರಣಾಳಿಕೆಯಲ್ಲಿ ಒತ್ತು– ಜಗನ್‌

Published 27 ಏಪ್ರಿಲ್ 2024, 10:33 IST
Last Updated 27 ಏಪ್ರಿಲ್ 2024, 10:33 IST
ಅಕ್ಷರ ಗಾತ್ರ

ಅಮರಾವತಿ: ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್ಆರ್‌ಸಿಪಿ ಮುಖ್ಯಸ್ಥ ವೈ.ಎಸ್‌.ಜಗನ್‌ಮೋಹನ್ ರೆಡ್ಡಿ ಶನಿವಾರ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಕಲ್ಯಾಣ ಪಿಂಚಣಿಯನ್ನು ₹3500ಕ್ಕೆ ಏರಿಸುವುದು, ವಿಶಾಖಪಟ್ಟಣವನ್ನು ಕಾರ್ಯಾಂಗ ರಾಜಧಾನಿಯನ್ನಾಗಿ ಮಾಡುವುದು ಸೇರಿದಂತೆ ಮತದಾರರಿಗೆ ಹಲವು ಭರವಸೆಗಳನ್ನು ನೀಡಿದ್ದಾರೆ.

ಅಮರಾವತಿಯನ್ನು ಶಾಸಕಾಂಗ ರಾಜಧಾನಿಯನ್ನಾಗಿ, ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸುವುದಾಗಿ ಜಗನ್ ಹೇಳಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಜಾರಿಗೆ ತಂದಿರುವ ಬಹುತೇಕ ಎಲ್ಲ ಯೋಜನೆಗಳನ್ನು ಮುಂದುವರಿಸುವುದಾಗಿ ಘೋಷಿಸಿರುವ ಜಗನ್, ಅಮ್ಮ ವೊಡಿಯಂಥ ಕೆಲವು ಯೋಜನೆಗಳಿಗೆ ಹೆಚ್ಚಿನ ಹಣ ಮೀಸಲಿಡುವುದಾಗಿ ತಿಳಿಸಿದ್ದಾರೆ.

ರಾಜಕೀಯ ಪಕ್ಷವೊಂದರ ಪ್ರಣಾಳಿಕೆಗೆ ತಮ್ಮ ಸರ್ಕಾರದ ಆಡಳಿತದಲ್ಲಿ ಮಾತ್ರವೇ ನಿಜವಾದ ಅರ್ಥ ಪ್ರಾಪ್ತವಾಗಿದ್ದು, ತಾವು ಪ್ರಣಾಳಿಕೆಯನ್ನು ಪವಿತ್ರ ಬೈಬಲ್, ಕುರಾನ್ ಮತ್ತು ಭಗವದ್ಗೀತೆಯಂತೆ ಪರಿಗಣಿಸುವುದಾಗಿ ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಮೇ 13ರಂದು ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT