ಹೈದರಾಬಾದ್: 2019ರಲ್ಲಿ ನಡೆದ ಮಾಜಿ ಸಚಿವ ವೈ.ಎಸ್.ವಿವೇಕಾನಂದ ರೆಡ್ಡಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸಂಸದ ವೈ.ಎಸ್.ಅವಿನಾಶ್ ರೆಡ್ಡಿ ಅವರು ಶುಕ್ರವಾರ ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ವಿವೇಕಾನಂದ ಅವರ ಹತ್ಯೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಕೇಂದ್ರೀಯ ಸಂಸ್ಥೆಯ ಮುಂದೆ ಅವಿನಾಶ್ ಅವರು ಮೂರನೇ ಬಾರಿ ಹಾಜರಾಗಿದ್ದಾರೆ.

ವಿವೇಕಾನಂದ ರೆಡ್ಡಿ ಅವರ ಸಂಬಂಧಿಕರಾಗಿರುವ ಅವಿನಾಶ್ ಅವರು ಸಿಬಿಐ ಸಮನ್ಸ್ ಜಾರಿ ಮಾಡಿದ ನಂತರ ಈ ವರ್ಷ ಜನವರಿ ಮತ್ತು ಫೆಬ್ರುವರಿಯಲ್ಲಿ ಸಿಬಿಐ ಮುಂದೆ ಹಾಜರಾಗಿದ್ದಾರೆ.

ವಿವೇಕಾನಂದ ರೆಡ್ಡಿ ಅವರು ಮಾಜಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ್ ರೆಡ್ಡಿ ಸಹೋದರ ಮತ್ತು ಹಾಲಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ. ಇವರು 2019 ಮಾರ್ಚ್ 15ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಒಂದು ವಾರಕ್ಕೂ ಮೊದಲು ಪುಲಿವೆಂದುಲದ ಅವರ ನಿವಾಸದಲ್ಲಿ ಕೊಲೆಯಾದರು.

ಈ ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ವಿಭಾಗದ ವಿಶೇಷ ತನಿಖಾ ತಂಡ (ಎಸ್‌ಐಟಿ)ವು ಕೈಗೆತ್ತಿಕೊಂಡಿದ್ದು, 2020ರಲ್ಲಿ ಸಿಬಿಐಗೆ ಹಸ್ತಾಂತರಿಸಿದೆ.

ಸಿಬಿಐ 2021 ಅಕ್ಟೋಬರ್ 26ರಂದು ದೋಷರೋಪ ಪಟ್ಟಿಯನ್ನು ಸಲ್ಲಿಸುವಲ್ಲಿ ವಿಫಲವಾಗಿತ್ತು. ನಂತರ 2022 ಜನವರಿ 31ರಂದು ಪೂರಕ ದೋಷರೋಪ ಪಟ್ಟಿಯನ್ನು ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.