ಮುಂಬೈ: ಹಲ್ಲೆ ನಡೆಸಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಯೂಸುಫ್ ಪಠಾಣ್ ಅವರ ಮಾವ, ಅವರ ಮಗ ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಕಾರು ಚಲಿಸುವಾಗ ರಸ್ತೆಗುಂಡಿಯಲ್ಲಿದ್ದ ನೀರು ಸಿಡಿಸಿದರು ಎಂಬ ಕಾರಣಕ್ಕೆ ಮೂವರ ಮೇಲೆ ಕೋಲು ಹಾಗೂ ಬೇಸ್ಬಾಲ್ ಬ್ಯಾಟ್ನಿಂದ ಹಲ್ಲೆ ನಡೆಸಿದ ಆರೋಪ ಇವರ ಮೇಲಿದೆ.

ಪ್ರಕರಣವೇನು:

ಎರಡು ದಿನಗಳ ಹಿಂದೆ ಮುಂಬೈನ ಬೈಕುಲ್ಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗುಂಡಿ ಬಿದ್ದಿದ್ದ ರಸ್ತೆಯಲ್ಲಿ ಕಾರು ಚಲಿಸುವಾಗ ಆರೋಪಿಗಳ ಪೈಕಿ ಒಬ್ಬರ ಮೇಲೆ ನೀರು ಚಿಮ್ಮಿತ್ತು. ಈ ಘಟನೆಯ ನಂತರ ಆರೋಪಿಗಳ ಗುಂಪು ಕಾರಿನಲ್ಲಿದ್ದ ವ್ಯಕ್ತಿ ಮತ್ತು ಅವರ ಕುಟುಂಬದ ಮೇಲೆ ಹಲ್ಲೆ ನಡೆಸಿದೆ ಎನ್ನಲಾಗಿದೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್ 118(2), 115(2), 324, 352, 351(2) ಮತ್ತು 3(5) ಸೇರಿದಂತೆ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಒಬ್ಬ ವ್ಯಕ್ತಿ ತಲೆಮರೆಸಿಕೊಂಡಿದ್ದಾರೆ ಎಂದು ಬೈಕುಲ್ಲಾ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳು, ಸಾಕ್ಷಿಗಳ ಹೇಳಿಕೆಗಳು ಮತ್ತು ಹಲ್ಲೆಗೆ ಬಳಸಲಾಗಿದೆ ಎನ್ನಲಾದ ಕೋಲು ಹಾಗೂ ಬೇಸ್ಬಾಲ್ ಬ್ಯಾಟ್ ಅನ್ನು ವಶಪಡಿಸಿಕೊಳ್ಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.