ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls: ಕಾಂಗ್ರೆಸ್‌ನ ಅಧೀರ್ ರಂಜನ್ ವಿರುದ್ಧ ಯೂಸುಫ್ ಪಠಾಣ್; ರಂಗೇರಿದ ಕಣ

Published 10 ಮಾರ್ಚ್ 2024, 9:42 IST
Last Updated 10 ಮಾರ್ಚ್ 2024, 9:42 IST
ಅಕ್ಷರ ಗಾತ್ರ

ಕೋಲ್ಕತ್ತ: ಮುಂಬರುವ ಲೋಕಸಭೆ ಚುನಾವಣೆಗೆ ಭಾರತ ತಂಡದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ತೃಣಮೂಲ ಕಾಂಗ್ರೆಸ್ (ಟಿಎಂಸಿ)ನಿಂದ ಕಣಕ್ಕೆ ಇಳಿದಿದ್ದಾರೆ. 

ಯೂಸುಫ್ ಪಠಾಣ್ ಅವರನ್ನು ಬೆಹ್ರಾಂಪುರ ಕ್ಷೇತ್ರದಿಂದ ಟಿಎಂಸಿ ಕಣಕ್ಕಿಳಿಸಿದೆ. ಈ ಕ್ಷೇತ್ರವನ್ನು ಈಗ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರತಿನಿಧಿಸುತ್ತಿದ್ದಾರೆ.

ಯೂಸುಫ್ ಪಠಾಣ್ ಮೂಲತಹ ವಡೋದರದವರು. ಇವರು 2001ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾಪರ್ಣೆ ಮಾಡಿದರು. ನಂತರ ರಣಜಿ ಹಾಗೂ ಭಾರತ ತಂಡದಲ್ಲಿ ಸ್ಥಾನ ಪಡೆದು ಆಡಿದರು. ಐಪಿಎಲ್‌ನಲ್ಲಿ ಕೋಲ್ಕತ್ತ ನೈಟ್‌ರೈಡರ್ಸ್‌(ಕೆಕೆಆರ್) ತಂಡವನ್ನು ಪ್ರತಿನಿಧಿಸಿ ಬಂಗಾಳದಲ್ಲಿ ಜನಪ್ರಿಯತೆ ಪಡೆದರು. 

ಯೂಸುಫ್ ಪಠಾಣ್ ಅವರು 2021ರಲ್ಲಿ ಕ್ರಿಕೆಟ್‌ನಿಂದ ನಿವೃತ್ತಿ ಘೋಷಣೆ ಮಾಡಿದರು.

ಪಶ್ಚಿಮ ಬಂಗಾಳದ 42 ಕ್ಷೇತ್ರಗಳಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತನ್ನ ಅಭ್ಯರ್ಥಿಗಳನ್ನು ಭಾನುವಾರ ಘೋಷಣೆ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT