ಸರ್ವ ಧರ್ಮ ಗೌರವಿಸಿ: ಕಾಂಗ್ರೆಸ್
ನವದೆಹಲಿ: ‘ಎಲ್ಲಾ ಧರ್ಮಗಳನ್ನು ಗೌರವಿಸಬೇಕು. ಜೊತೆಗೆ ತನ್ನ ಸ್ವಂತ ಅಭಿಪ್ರಾಯ ಹಂಚಿಕೊಳ್ಳಲು ಪ್ರತಿ ರಾಜಕೀಯ ಪಕ್ಷಕ್ಕೂ ಸ್ವಾತಂತ್ರ್ಯವಿದೆ’ ಎಂದು ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಸನಾತನ ಧರ್ಮದ ಬಗ್ಗೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆ ಬಗ್ಗೆ ಕಾಂಗ್ರೆಸ್ ಮೌನವಹಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಪ್ರಶ್ನಿಸಿದ ಬೆನ್ನಲ್ಲೇ ಕೈಪಾಳಯದಿಂದ ಭಿನ್ನವಾದ ಹೇಳಿಕೆ ಹೊರಬಿದ್ದಿದೆ. ‘ಸರ್ವ ಧರ್ಮಗಳನ್ನು ಸಮಾನವಾಗಿ ಕಾಣಬೇಕು ಎಂಬುದು ಪಕ್ಷದ ಸಿದ್ಧಾಂತ. ಆದರೆ ಆಯಾ ಪಕ್ಷಗಳು ಸ್ವಂತ ಅಭಿಪ್ರಾಯ ಮಂಡಿಸಲು ಸ್ವಾತಂತ್ರ್ಯ ಹೊಂದಿವೆ ಎಂಬುದನ್ನೂ ಬಿಜೆಪಿ ಅರ್ಥಮಾಡಿಕೊಳ್ಳಬೇಕಿದೆ. ಪ್ರತಿಯೊಬ್ಬರು ನಂಬಿಕೆಗಳನ್ನು ನಾವು ಗೌರವಿಸುತ್ತೇವೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.