ಹೈದರಾಬಾದ್, (ಐಎಎನ್ಎಸ್) ಕರ್ನಾಟಕ ರಾಜ್ಯದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಭಾವ ಶ್ರೀನಿವಾಸ ರೆಡ್ಡಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಸೋಮವಾರ ಇಲ್ಲಿನ ವಿಶೇಷ ನ್ಯಾಯಾಲಯವು ಅಕ್ಟೋಬರ್ 3 ರವರೆಗೆ ವಿಸ್ತರಿಸಿದೆ.

ಸಿಬಿಐ ಅಧಿಕಾರಿಗಳ ತಂಡವು ಭದ್ರತೆಯೊಂದಿಗೆ ಜನಾರ್ದನ ರೆಡ್ಡಿ ಹಾಗೂ ಅವರ ಭಾವ ಶ್ರೀನಿವಾಸ ರೆಡ್ಡಿ ಅವರನ್ನು ಇಲ್ಲಿನ ನಾಂಪಳ್ಳಿಯ ವಿಶೇಷ ನ್ಯಾಯಾಲಯದಲ್ಲಿ ಹಾಜರು ಪಡಿಸಿ, ಇನ್ನೂ ವಿಚಾರಣೆ ನಡೆಯಬೇಕಿದ್ದು, ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿತು.

ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಜನಾರ್ದನ ರೆಡ್ಡಿ ಹಾಗೂ ಶ್ರೀನಿವಾಸ ರೆಡ್ಡಿ ಅವರನ್ನು ಸಿಬಿಐ ವಿಚಾರಣೆಗಾಗಿ ಸೆ.13ರಿಂದ ಆರು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತ್ತು. ಇದೀಗ ಸಿಬಿಐನ ಮನವಿಯ ಮೇರೆಗೆ ನ್ಯಾಯಾಲಯವು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.