ನವದೆಹಲಿ(ಪಿಟಿಐ): ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಹಾಗೂ ಜನರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಅಕ್ಟೋಬರ್1ರಿಂದ 15ರವರೆಗೆ ಗ್ರಾಮ ಸಮೃದ್ಧಿ ಮತ್ತು ಸ್ವಚ್ಛತಾ ಪ್ರಚಾರ ಅಭಿಯಾನವನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ.
‘ಗ್ರಾಮಗಳ ಅಭಿವೃದ್ಧಿಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಗಳ ಸಹಯೋಗದಲ್ಲಿ ಹಮ್ಮಿಕೊಳ್ಳುವ ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಎಲ್ಲಾ ಸಂಸದರಿಗೆ ಪತ್ರ ಬರೆಯ ಲಾಗಿದೆ’ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
‘ಹಳ್ಳಿಗಳ ಸಮಗ್ರ ಅಭಿವೃದ್ಧಿ ಗಾಗಿ ಪಂಚಾಯಿತಿ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಂಸದರು ಮುಂದಾಗಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.