ನವದೆಹಲಿ: ಕೇಂದ್ರ ಸಚಿವ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್ ಪ್ರಸ್ತುತ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ರಕ್ಷಣಾ ಖಾತೆ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಗೋವಾ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿರುವ ಪರಿಕ್ಕರ್ ಇಂದು ರಾಜೀನಾಮೆ ಸಲ್ಲಿಸಿದ್ದು, ರಾಷ್ಟ್ರಪತಿ ಪ್ರಣವ್ ಮುಖರ್ಜಿ ರಾಜೀನಾಮೆ ಪತ್ರ ಸ್ವೀಕರಿಸಿದ್ದಾರೆ.

[related]

ನಾಳೆ ಸಂಜೆ 5 ಗಂಟೆಗೆ ಪಣಜಿಯಲ್ಲಿ ಗೋವಾದ ನೂತನ ಸರ್ಕಾರದ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಮೊದಲಾದ ಪ್ರಮುಖರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪರಿಕ್ಕರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.