ನವದಹೆಲಿ: ಅಲ್ಪಸಂಖ್ಯಾತ ಸಮುದಾಯದವರ ಶೈಕ್ಷಣಿಕ ಮಟ್ಟವನ್ನು ಸುಧಾರಿಸಲು ಇರುವ ಯೋಜನೆಗಳನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರಗಳು ವಿಫಲಗೊಂಡಿವೆ ಎಂದು ಕೇಂದ್ರ ಸೋಮವಾರ ಅಭಿಪ್ರಾಯಪಟ್ಟಿದೆ.

ಎನ್ಎಂಸಿಎಂಇ (ಅಲ್ಪಸಂಖ್ಯಾತ ಶಿಕ್ಷಣ ಕುರಿತ ರಾಷ್ಟ್ರಿಯ ನಿಗಾ ಮಂಡಳಿ)ಸಭೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಕಪಿಲ್ ಸಿಬಲ್ ಈ ಅಭಿಪ್ರಾಯ ವ್ಯಕ್ತಪಡಿಸಿದರು.

`ಕೇಂದ್ರದ ಹೆಚ್ಚಿನ ಎಲ್ಲಾ ಯೋಜನೆಗಳು ರಾಜ್ಯ ಸರ್ಕಾರದ ಮೂಲಕವೇ ಜಾರಿಗೊಳ್ಳಬೇಕಾಗಿರುವುದರಿಂದ ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸಬೇಕು~ ಎಂದು ಕಪಿಲ್ ಸಿಬಲ್ ಒತ್ತಿ ಹೇಳಿದರು.

ಈ ಹಿನ್ನೆಲೆಯಲ್ಲಿ ಸಮಸ್ಯೆಗಳನ್ನು ಪತ್ತೆಹಚ್ಚಿ ಸೂಕ್ತ ಪರಿಹಾರ ಮಾರ್ಗಗಳನ್ನು ಕಂಡುಹುಡುಕುವಲ್ಲಿ ಸಹಾಯವಾಗುವಂತೆ ಐದು ಉಪ ಸಮಿತಿಗಳನ್ನು ರಚಿಸಲಾಗುವುದು ಎಂದು ಸಿಬಲ್ ನೇತೃತ್ವದ ತಂಡವು ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.