ನವದೆಹಲಿ (ಪಿಟಿಐ): ಮಾಜಿ ದೂರಸಂಪರ್ಕ ಕಾರ್ಯದರ್ಶಿ ಸಿದ್ಧಾರ್ಥ ಬೆಹುರಾ ಅವರು 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ಆರೋಪ ಹೊರಿಸಿರುವುದನ್ನು ಪ್ರಶ್ನಿಸಿ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾಯಮೂರ್ತಿ ಎಂ.ಎಲ್. ಮೆಹ್ತಾ ಅವರು, ಮಾರ್ಚ್ 13ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.

ಬೆಹುರಾ ಪರ ವಕೀಲ ಅಮನ್ ಲೇಖಿ, ವಾದ ಮಂಡಿಸಲು ಮುಂದಾದಾಗ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ಇದೇ ಪ್ರಕರಣದ ಇತರ ಆರೋಪಿಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆ ಮಾರ್ಚ್ 12 ಮತ್ತು 13ರಂದು ನಡೆಯುತ್ತಿದ್ದು, ಆಗಲೇ ಈ ಅರ್ಜಿಯನ್ನೂ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು.

ಕಳೆದ ವರ್ಷದ ಫೆಬ್ರುವರಿ 2ರಂದು ಬಂಧಿತರಾದ ಬೆಹುರಾ ಆಗಿನಿಂದಲೂ ಮಾಜಿ ದೂರಸಂಪರ್ಕ ಸಚಿವ ಎ. ರಾಜಾ ಅವರೊಂದಿಗೆ ಸೆರೆವಾಸ ಅನುಭವಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.