ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ವೃದ್ಧಿದರ ದ್ವಿಗುಣಗೊಳಿಸಲು ಕೈಜೋಡಿಸಿ: ಪ್ರಧಾನಿ ಮೋದಿ

Last Updated 17 ಜೂನ್ 2018, 10:23 IST
ಅಕ್ಷರ ಗಾತ್ರ

ನವದೆಹಲಿ: ‘ದೇಶದ ಆರ್ಥಿಕ ಬೆಳವಣಿಗೆ ದರವನ್ನು ಎರಡಂಕಿಗೆ ಕೊಂಡೊಯ್ಯಬೇಕಿದೆ’ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ನೀತಿ ಆಯೋಗದ ಆಡಳಿತ ಮಂಡಳಿ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರವಾಹ ಪೀಡಿತ ರಾಜ್ಯಗಳಲ್ಲಿನ ಪರಿಸ್ಥಿತಿ ನಿಭಾಯಿಸಲು ಬೇಕಾದ ಸಂಪೂರ್ಣ ಸಹಕಾರ ನೀಡುವುದಾಗಿ ಪ್ರಧಾನಿ ಮೋದಿ ಇದೇ ವೇಳೆ ಭರವಸೆ ನೀಡಿದರು.

‘2017-18ನೇ ಸಾಲಿನ ನಾಲ್ಕನೇ ತ್ರೈಮಾಸಿಕದಲ್ಲಿ ಆರ್ಥಿಕ ಬೆಳವಣಿಗೆ ದರ ಶೇಕಡ 7.7 ಇತ್ತು ಎಂದು ನೆನಪಿಸಿದ ಪ್ರಧಾನಿ, ಈ ದರ 2020ರ ವೇಳೆಗೆ ಎರಡಂಕಿಗೆ ಏರಲು ಶ್ರಮಿಸಬೇಕಿದೆ’ ಎಂದು ಹೇಳಿದರು.

‘ನೀತಿ ಆಯೋಗದ ಆಡಳಿತ ಮಂಡಳಿಯು ರಾಜ್ಯ ಸರ್ಕಾರಗಳನ್ನು ಒಳಗೊಂಡ ‘ಟೀಮ್‌ ಇಂಡಿಯಾ’ವನ್ನು ಮುನ್ನಡೆಸುತ್ತ, ಅವುಗಳ ನಡುವಿನ ಸಂಕೀರ್ಣ ಸಮಸ್ಯೆಗಳನ್ನು ಸಹಕಾರ, ಒಕ್ಕೂಟ ವ್ಯವಸ್ಥೆ ನೆಲೆಯಲ್ಲಿ ಪರಿಹರಿಸಲಿದೆ’ ಎಂದರು.

‘ಪ್ರಸ್ತುತ ಹಣಕಾಸಿನ ವರ್ಷದಲ್ಲಿ ರಾಜ್ಯಗಳು ₹ 11 ಲಕ್ಷ ಕೋಟಿಗಿಂತ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರದಿಂದ ಪಡೆಯಲಿವೆ. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಈ ಮೊತ್ತ ಸುಮಾರು ₹ 5 ಲಕ್ಷ ಕೋಟಿಯಷ್ಟಿತ್ತು’ ಎಂದು ಮಾಹಿತಿ ನೀಡಿದರು.

ರೈತರ ಆದಾಯ ದ್ವಿಗುಣಗೊಳಿಸುವಿಕೆ, ಜಿಲ್ಲೆಗಳ ಅಭಿವೃದ್ಧಿ, ಅಪೌಷ್ಠಿಕತೆ ನಿವಾರಣೆ, ಆಯುಷ್ಮಾನ್ ಭಾರತ್, ಮಿಷನ್‌ ಇಂಧ್ರಧನುಷ್‌ ಯೋಜನೆ ಜಾರಿ ಮತ್ತು ಗಾಂಧೀಜಿಯವರ 150ನೇ ಜನ್ಮದಿನ ಆಚರಣೆಯ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಪ್ರಸ್ತಾಪಿಸಿದ ಪ್ರಮುಖ ವಿಷಯಗಳು

* ರಾಜ್ಯದಲ್ಲಿನ 85 ಲಕ್ಷ ರೈತರ ಸಾಲಮನ್ನಾ ಮಾಡಲು ಕೇಂದ್ರ ಸರ್ಕಾರ ಶೇಕಡ 50 ನೆರವು ನೀಡಬೇಕು.

* ಯಾದಗಿರಿ ಮತ್ತು ರಾಯಚೂರಿನಂತಹ ಪ್ರತಿ ಹಿಂದೂಳಿದ ಜಿಲ್ಲೆಗಳ ಅಭಿವೃದ್ಧಿಗೆ ಮುಂದಿನ ಐದು ವರ್ಷಗಳ ಕಾಲ ₹ 100 ಕೋಟಿ ಅನುದಾನ ನೀಡಬೇಕು.

* ಯುವಜನರ ಕೌಶಲಾಭಿವೃದ್ಧಿ ತರಬೇತಿ ಮತ್ತು ಉದ್ಯೋಗಕ್ಕಾಗಿ ರಾಜ್ಯ ಸರ್ಕಾರ ಕೈಗೊಳ್ಳುವ ಪ್ರಯತ್ನಗಳನ್ನು ದ್ವಿಗುಣಗೊಳಿಸಲು ನೆರವಾಗಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT