ಲಖನೌ (ಪಿಟಿಐ): ಉತ್ತರ ಪ್ರದೇಶ ವಿಧಾನ ಸಭೆಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಕೈರಾನ ಕ್ಷೇತ್ರದ ಶಾಸಕ ಹುಕುಂ ಸಿಂಗ್ ಆಯ್ಕೆಯಾಗಿದ್ದಾರೆ. ಹಲವು ಬಾರಿ ಶಾಸಕರಾಗಿದ್ದ ಅವರು ಕಳೆದ ವಿಧಾನಸಭೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಉಪನಾಯಕರಾಗಿದ್ದರು.

ಶಾಸನ ಸಭೆಯಲ್ಲಿ ಪಕ್ಷದ ಹಿರಿಯ ನಾಯಕ, ಶಾಸಕ ಕಲ್ರಾಜ್ ಮಿಶ್ರಾ ಅವರು ಹುಕಂ ಸಿಂಗ್ ಅವರ ಹೆಸರನ್ನು ಸೂಚಿಸಿದರು. ಶಾಸಕರು ಒಮ್ಮತದಿಂದ ಸಿಂಗ್ ಅವರನ್ನು ಆಯ್ಕೆ ಮಾಡಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಸೂರ್ಯ ಪ್ರತಾಪ ಶಾಹಿ ಸೇರಿದಂತೆ ಕೇಂದ್ರ ವೀಕ್ಷಕರಾಗಿ ತಾವರ್ ಚಂದ್ರ ಮತ್ತು ನರೇಂದ್ರ ಸಿಂಗ್ ತೋಮರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.