ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಪಿ ಜತೆ ಮೈತ್ರಿ ಇಲ್ಲ: ಮಾಯಾವತಿ

Last Updated 4 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದ ಗೋರಖಪುರ ಮತ್ತು ಫುಲ್ಪುರ ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಜತೆಗೆ ಯಾವುದೇ ಮೈತ್ರಿ ಇಲ್ಲ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ.

ಆದರೆ ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಗಳಲ್ಲಿ ಎರಡೂ ಪಕ್ಷಗಳ ನಡುವೆ ಹೊಂದಾಣಿಕೆ ಸಾಧ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಇದೇ 11ರಂದು ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಅವಕಾಶ ಎಸ್‌ಪಿಗೆ ಇದೆ. ಹಾಗಾಗಿ ಆ ಪಕ್ಷವನ್ನು ಬೆಂಬಲಿಸುವಂತೆ ಮಾಯಾವತಿ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವರದಿಯನ್ನು ಮಾಯಾವತಿ ಅವರು ಅಲ್ಲಗಳೆದಿದ್ದಾರೆ.

‘ಗೋರಖಪುರ ಮತ್ತು ಫುಲ್ಪುರ ಕ್ಷೇತ್ರಗಳಲ್ಲಿ ಬಿಎಸ್‌ಪಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿಲ್ಲ. ಆದರೆ ಅದರ ಅರ್ಥ ಬಿಎಸ್‌ಪಿ ಬೆಂಬಲಿಗರು ಮತವನ್ನೇ ಹಾಕುವುದಿಲ್ಲ ಎಂದಲ್ಲ. ಬಿಎಸ್‌ಪಿ ಬೆಂಬಲಿಗರು ಮತ ಹಾಕಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವ ಅಭ್ಯರ್ಥಿಗಳಿಗೆ ಮತ ಹಾಕುವಂತೆ ನಾನು ಕರೆ ನೀಡಿದ್ದೇನೆ. ಅದರಲ್ಲಿ ಯಾವ ತಪ್ಪೂ ಇಲ್ಲ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT