ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐವರು ಭಾರತೀಯ ಯೋಧರನ್ನು ಹತ್ಯೆ ಮಾಡಿದ್ದೇವೆ ಎಂದ ಪಾಕ್; ಪಾಕ್ ವಾದ ತಳ್ಳಿ ಹಾಕಿದ ಭಾರತೀಯ ಸೇನೆ

Last Updated 3 ಜೂನ್ 2017, 17:12 IST
ಅಕ್ಷರ ಗಾತ್ರ

ನವದೆಹಲಿ: ಗಡಿ ನಿಯಂತ್ರಣಾ ರೇಖೆ ಬಳಿ ಶನಿವಾರ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಸೇನೆ ಟಟ್ಟಾ ಪಾನಿ- ಕೃಷ್ಣ ಘಾಟಿ ವಲಯದಲ್ಲಿ ಭಾರತದ 5  ಯೋಧರನ್ನು ಹತ್ಯೆ ಮಾಡಿದೆ ಎಂದು ಪಾಕ್ ಹೇಳಿದೆ.

ಆದರೆ ಪಾಕಿಸ್ತಾನದ ವಾದ ಸತ್ಯಕ್ಕೆ ದೂರವಾದುದು ಎಂದು ಭಾರತೀಯ ಸೇನೆಯ ಹಿರಿಯ ಅಧಿಕಾರಿ ಹೇಳಿದ್ದಾರೆ.

ಶನಿವಾರ ಮಧ್ಯಾಹ್ನ ಟಟ್ಟಾ ಪಾನಿ ವಲಯದಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಸಿದೆ. ಈ ದಾಳಿಯಲ್ಲಿ ಭಾರತದ ಐವರು ಯೋಧರನ್ನು ಹತ್ಯೆ ಮಾಡಲಾಗಿದೆ ಮತ್ತು ಭಾರತೀಯ ಬಂಕರ್‍‍ಗಳನ್ನು ಹೊಡೆದುರುಳಿಸಲಾಗಿದೆ ಎಂದು ಪಾಕಿಸ್ತಾನ ಸೇನೆ ಹೇಳಿದೆ.

ಪಾಕಿಸ್ತಾನದ ಈ ಹೇಳಿಕೆ ಬಗ್ಗೆ ಪ್ರತಿಕ್ರಯಿಸಿದ ಭಾರತೀಯ ಸೇನೆಯ ಹಿರಿಯ ಅಧಿಕಾರಿ, ಭಾರತೀಯ ಯೋಧರಿಗೆ ಯಾವುದೇ ಸಾವು ನೋವು ಸಂಭವಿಸಿಲ್ಲ. ಶುಕ್ರವಾರ ರಾತ್ರಿ 11 ಗಂಟೆಗೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಶನಿವಾರ ಮಧ್ಯಾಹ್ನದ ವರೆಗೆ ಗುಂಡಿನ ದಾಳಿ ಮುಂದುವರಿಸಿತ್ತು. ಈ ದಾಳಿಯಲ್ಲಿ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ನಾಗರಿಕರಿಗೆ ಗಾಯಗಳಾಗಿವೆ. ಪಾಕ್ ದಾಳಿಗೆ ನಾವು ತಕ್ಕ ಉತ್ತರ ನೀಡಿದ್ದೇವೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT