ಸಿಲ್ಚಾರ್, ಅಸ್ಸಾಂ(ಐಎಎನ್ಎಸ್): ಅಸ್ಸಾಂನ ಕರೀಮ್ಗಂಜ್ ಜಿಲ್ಲೆಯಲ್ಲಿ ಇಬ್ಬರು ಶಾಲಾ ಬಾಲಕಿಯರು ಒಂದೇ ಹಗ್ಗದ ಎರಡು ತುದಿಗಳನ್ನು ಬಳಸಿಕೊಂಡು ಮರವೊಂದಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಈ ಘಟನೆ ಉತ್ತರ ಪ್ರದೇಶದ ಬದಾಯುನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ನೆನಪಿಸುವಂತಿದೆ. ‘ನೀಲಂಬಜಾರ್ ಪ್ರದೇಶದ ಶಾಲೆಯೊಂದರಲ್ಲಿ ಹತ್ತು ಹಾಗೂ ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಈ ಇಬ್ಬರೂ ಬಾಲಕಿಯರು ಬುಧವಾರ ಸಂಜೆಯಿಂದ ಕಾಣೆಯಾಗಿದ್ದರು.
ಮೃತದೇಹಗಳನ್ನು ಮರಣೋತ್ತರ ಹಾಗೂ ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಇವುಗಳ ವರದಿ ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯುತ್ತದೆ’ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.