ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣಿವೆ ರಾಜ್ಯದಲ್ಲಿ ಇನ್ನೂ 1.5 ಲಕ್ಷ ಜನರು ಸಂಕಷ್ಟದಲ್ಲಿ

Last Updated 14 ಸೆಪ್ಟೆಂಬರ್ 2014, 11:36 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ಕಾಶ್ಮೀರದಲ್ಲಿ ಇನ್ನೂ 1.5 ಲಕ್ಷ ಜನರು ಸಂಕಷ್ಟದಲ್ಲಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲಾ ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಅವರು ಮಾತನಾಡಿದರು. ಈ ಸಭೆಗೆ ಪಿಡಿಪಿ, ಕಾಂಗ್ರೆಸ್‌ ಮತ್ತು ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು.

ರಾಜ್ಯದಲ್ಲಿ ಭೀಕರ ಪ್ರವಾಹದಿಂದಾಗಿ ಆಸ್ತಿ ಮತ್ತು ಮೂಲಸೌಕರ್ಯ ಸೇರಿದಂತೆ ಸುಮಾರು ಆರು ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಒಮರ್‌ ವಿವರಿಸಿದರು.

ಜಮ್ಮು ಮತ್ತು ಶ್ರೀನಗರದ ಕೆಲ ಭಾಗಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. 30 ಸಾವಿರ ಸೌರದೀಪಗಳನ್ನು ನೀಡಲಾಗಿದೆ. ಚರಂಡಿಯಲ್ಲಿ ಹೂಳನ್ನು ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಲಾಗುತ್ತಿದೆ. ತಾತ್ಕಾಲಿಕ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಒಮರ್‌ ಸಭೆಗೆ ತಿಳಿಸಿದರು.

ನಿರಾಶ್ರಿತರ ಶಿಬಿರಗಳಲ್ಲಿ ತಂಗಿರುವ ಸಂತ್ರಸ್ತರಿಗೆ ಆಹಾರು, ನೀರು ಬಟ್ಟೆ, ಔಷಧಿ ಪೂರೈಕೆ ಕಾರ್ಯ  ನಿರಾತಂಕವಾಗಿ ನಡೆಯುತ್ತಿದೆ ಎಂದು ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT