ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾಂಗೆ ಅಂತಿಮ ವಿದಾಯ

Last Updated 30 ಜುಲೈ 2015, 9:18 IST
ಅಕ್ಷರ ಗಾತ್ರ

ರಾಮೇಶ್ವರಂ (ಪಿಟಿಐ): ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್‌ ಕಲಾಂ  ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳು ಹಾಗೂ ಇಸ್ಲಾಂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ನೆರವೇರಿತು.

ಇಲ್ಲಿನ ಪೆಯಕರಂಬು ಮೈದಾನದಲ್ಲಿ ಕಲಾಂ ಅವರ ಅಂತ್ಯಕ್ರಿಯೆಗೆ ಬೆಳಗ್ಗೆಯಿಂದಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.

ಕಲಾಂ ಅವರ ಪಾರ್ಥಿವ ಶರೀರರಕ್ಕೆ ಸಾರ್ವಜನಿಕರು ಮತ್ತು ಗಣ್ಯ ವ್ಯಕ್ತಿಗಳು ಅಂತಿಮ ನಮನ ಸಲ್ಲಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್‌ ಪಕ್ಷದ ಉಪಾಧ್ಯಕ್ಷ ರಾಹುಲ್‌ ಗಾಂಧಿ, ತಮಿಳುನಾಡಿನ ರಾಜ್ಯಪಾಲ ರೋಸಯ್ಯ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ, ಕೇಂದ್ರ ಸಚಿವರು ಸೇರಿದಂತೆ ಅನೇಕ ಗಣ್ಯರು ಅಂತ್ಯಕ್ರಿಯೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿದ ಬಳಿಕ ಕಲಾಂ ಅವರ ಪಾರ್ಥಿವ ಶರೀರವನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ನಂತರ ಇಸ್ಲಾಂ ಧಾರ್ಮಿಕ ವಿಧಿ ವಿಧಾನಗಳ ಅನುಸಾರ ಕಲಾಂ ಅವರ ಅಂತ್ಯಕ್ರಿಯೆ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT