ಈರೋಡ್: ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಮಕ್ಕಳ್ ನೀದಿ ಮಯ್ಯಂ (ಎಂಎನ್‌ಎಂ) ಪಕ್ಷದ ಸಂಸ್ಥಾಪಕ ಕಮಲಹಾಸನ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಮಹಿಳೆಯರ ರಕ್ಷಣೆಗಾಗಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೆಲ ದಿನಗಳ ಹಿಂದೆ ಚೆನ್ನೈನಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿಯ ಕೊಲೆ ಸೇರಿದಂತೆ ಇತ್ತೀಚೆಗೆ ಮಹಿಳೆಯ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ಅವರು ಉಲ್ಲೇಖಿಸಿದ್ದಾರೆ.

ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಅವಮಾನಕರ. ಮಹಿಳೆಯರು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಜಿಎಸ್‌ಟಿಯನ್ನು ಕಸದ ಬುಟ್ಟಿಗೆ ಎಸೆಯಬೇಕು. ಇದರ ಜಾರಿಯಿಂದಾಗಿ ಎಲ್ಲಾ ವಲಯದಲ್ಲಿ ದುಷ್ಪರಿಣಾಮಗಳಾಗಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.