ಶ್ರೀನಗರ/ರಾಂಚಿ (ಪಿಟಿಐ/ಐಎಎನ್ಎಸ್): ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಕ್ರಮವಾಗಿ ಐದು ಹಾಗೂ ಒಂದು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಮತ್ತೊಂದೆಡೆ, ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಮುನ್ನಡೆ ಹೊಂದಿದ್ದರೆ ಜಾರ್ಖಂಡ್ ರಾಜ್ಯದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.