ಜೋಧಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ದೋಷಿ ಎಂದು ಇಲ್ಲಿನ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣದಲ್ಲಿ ಸಲ್ಮಾನ್ ಖಾನ್ ಹೊರತುಪಡಿಸಿ ಇತರ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಅವರನ್ನು ಸಹ ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮಾರ್ಚ್ 28ರಂದು ಮುಕ್ತಾಯಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಏನಿದು ಪ್ರಕರಣ?: 1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್ ವೇಳೆ ಜೋಧಪುರ ಸಮೀಪದ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ್ದರು. ಈ ಬೇಟೆಗೆ ಪರವಾನಗಿ ಇಲ್ಲದ ಬಂದೂಕು ಬಳಕೆ ಮಾಡಲಾಗಿತ್ತು ಎಂಬ ಆರೋಪವಿದೆ. ರಕ್ಷಿತಾರಣ್ಯ ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಸಲ್ಮಾನ್ ಖಾನ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 9/51 ಮತ್ತು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.