ನವದೆಹಲಿ (ಪಿಟಿಐ): ಮೂರು ಬಾರಿ ದೆಹಲಿ ಮುಖ್ಯಮಂತ್ರಿಯ ಪಟ್ಟ ಅಲಂಕರಿಸಿದ್ದ ಶೀಲಾ ದೀಕ್ಷಿತ್ ಅವರು ಕೇರಳ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಇತ್ತೀಚಿಗೆ ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಅವರು ಸೋಲು ಕಂಡ ಮೂರು ತಿಂಗಳಲ್ಲಿ ಈ ನಿರ್ಧಾರ ಹೊರ ಬಿದ್ದಿದೆ.

75 ವರ್ಷ ವಯಸ್ಸಿನ ದೀಕ್ಷಿತ್ ಅವರಿಗೆ ಈ ವಿಷಯ ತಿಳಿಸಲಾಗಿದ್ದು, ಅವರು ನಿಖಿಲ್ ಕುಮಾರ್ ಅವರಿಂದ ತೆರವಾದ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಉನ್ನತ ಮೂಲಗಳು ಹೇಳಿವೆ.

ನಿಖಿಲ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದು ಅಂಗೀಕೃತಗೊಂಡಿದೆ ಎಂದು ರಾಷ್ಟ್ರಪತಿ ಭವನದ ವಕ್ತಾರರನ್ನು ಸಂಪರ್ಕಿಸಿದಾಗ ತಿಳಿದು ಬಂದಿದೆ.

ಕಾಂಗ್ರೆಸ್ ಹಿರಿಯ ನಾಯಕಿಯಾಗಿರುವ ದೀಕ್ಷಿತ್ ಅವರು ಮಂಗಳವಾರವಷ್ಟೇ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಅವರನ್ನು ರಾಜ್ಯಪಾಲರನ್ನಾಗಿಸುವ ನಿರ್ಧಾರ ತಿಳಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.