ಕೋಲ್ಕತ್ತ(ಪಿಟಿಐ): ಕಾನೂನು ತರಬೇತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಕೆ. ಗಂಗೂಲಿ ಅವರು ಕೊನೆಗೂ ಒತ್ತಡಗಳಿಗೆ ಮಣಿದು ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸೋಮವಾರ ಸಂಜೆ ಏಕಾಏಕಿ ರಾಜಭವನಕ್ಕೆ ತೆರಳಿದ ಗಂಗೂಲಿ, ರಾಜ್ಯಪಾಲ ಎಂ.ಕೆ. ನಾರಾಯಣನ್ ಅವರನ್ನು ಕಂಡು ರಾಜೀನಾಮೆ ಸಲ್ಲಿಸಿದರು. ಆದರೆ, ರಾಜೀನಾಮೆ ನೀಡಿರುವ ಕುರಿತು ರಾಜಭವನ ಮೂಲಗಳು ಖಚಿತ ಮಾಹಿತಿ ನೀಡಿಲ್ಲ.