ಕೋಲ್ಕತ್ತ (ಪಿಟಿಐ): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದ ಬೆನ್ನಲ್ಲೇ, ಕಾಂಗ್ರೆಸ್ ಕೂಡಾ ಅವರನ್ನು ತಮ್ಮ ಪಕ್ಷಕ್ಕೆ ಕರೆತರಲು ತೆರೆಮರೆಯ ಪ್ರಯತ್ನ ನಡೆಸಿದೆ.

ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಭಟ್ಟಾಚಾರ್ಯ ಭಾನುವಾರ ಗಂಗೂಲಿ ಅವರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿ ಪಕ್ಷದಿಂದ ರಾಜ್ಯಸಭೆಗೆ ನೇಮಿಸುವ ಇಲ್ಲವೇ ಲೋಕಸಭೆಗೆ ಟಿಕೆಟ್ ನೀಡುವ ಸಂಬಂಧ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಗಂಗೂಲಿ ಅವರಿಗೆ ತಾವು ಬಯಸಿದ ಕ್ಷೇತ್ರದ ಟಿಕೆಟ್ ನೀಡುವುದರ ಜೊತೆಗೆ ಪಕ್ಷ ಅಧಿಕಾರಕ್ಕೆ ಬಂದರೆ ಕ್ರೀಡಾ ಸಚಿವರನ್ನಾಗಿ ನೇಮಿಸುವ ಭರವಸೆಯನ್ನು ಬಿಜೆಪಿ ನೀಡಿತ್ತು. ತಮಗೆ ಆಹ್ವಾನ ಬಂದಿರುವುದನ್ನು ಒಪ್ಪಿಕೊಂಡಿದ್ದ ಸೌರವ್, ಯೋಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.