ಹೈದರಾಬಾದ್ (ಪಿಟಿಐ): ವೈ.ಎಸ್. ಜಗನ್ಮೋಹನ್ ರೆಡ್ಡಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ `ಇಂಡಿಯಾ ಸಿಮೆಂಟ್ಸ್~ ಕಂಪೆನಿ ವ್ಯವಸ್ಥಾಪಕ ನಿರ್ದೇಶಕರೂ ಆದ ಬಿಸಿಸಿಐ ಮುಖ್ಯಸ್ಥ ಎನ್. ಶ್ರೀನಿವಾಸನ್ ಅವರಿಗೆ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

`ಇಂಡಿಯಾ ಸಿಮೆಂಟ್ಸ್~ ಕಂಪೆನಿಯು ವೈ.ಎಸ್. ರಾಜಶೇಖರ ರೆಡ್ಡಿ ಅವರ ಅಧಿಕಾರಾವಧಿಯಲ್ಲಿ ಜಗನ್ ಒಡೆತನದ ಕಂಪೆನಿಗಳಲ್ಲಿ ಹೂಡಿಕೆ ಮಾಡಿದೆ ಎಂಬ ಆಪಾದನೆಯ ಹಿನ್ನೆಲೆಯಲ್ಲಿ ಶ್ರೀನಿವಾಸನ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ.

ಇನ್ನಿತರ ಸಿಮೆಂಟ್ ಕಂಪೆನಿಗಳ ಅಧಿಕಾರಿಗಳಿಗೂ ತನ್ನ ಮುಂದೆ ಹಾಜರಾಗುವಂತೆ ಸಿಬಿಐ ನಿರ್ದೇಶಿಸಿದೆ. ಈ ಕಂಪೆನಿಗಳಿಗೆ ರಾಜಶೇಖರ ರೆಡ್ಡಿ ಅವರ ಅಧಿಕಾರ ಅವಧಿಯಲ್ಲಿ ಪೂರೈಕೆ ಮಾಡಲಾಗಿದ್ದ ನೀರು ಮತ್ತು ಸುಣ್ಣದಕಲ್ಲುಗಳ ವಿಚಾರವಾಗಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಜಗನ್ ತಮ್ಮ ತಂದೆ ರಾಜಶೇಖರ ರೆಡ್ಡಿ ಅವರ ಪ್ರಭಾವವನ್ನು ಬಳಸಿಕೊಂಡು ತಾವು ನಡೆಸುತ್ತಿರುವ ಉದ್ದಿಮೆ- ಇನ್ನಿತರ ವ್ಯವಹಾರಗಳಲ್ಲಿ ಹೂಡಿಕೆ ಮಾಡಿರುವ ಕೆಲವರಿಗೆ ಕಾನೂನು ಬಾಹಿರವಾಗಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ತನಿಖಾ ಸಂಸ್ಥೆಯು ಆರೋಪಪಟ್ಟಿಯಲ್ಲಿ ಆಪಾದಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.