ನವದೆಹಲಿ (ಪಿಟಿಐ): ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ವಿರುದ್ಧ ಬೆಂಗಳೂರಿನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಸುಪ್ರೀಂಕೋರ್ಟ್ 10 ದಿನಗಳ ಕಾಲ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಆದರೆ, ಜಯಲಿಲಿತಾ ಅವರ ಮೇಲಿನ ಸಿವಿಲ್ ಪ್ರಕರಣಗಳ ವಿಚಾರಣೆ ನಡೆಯಲಿದೆ ಎಂದು ಪ್ರಕರಣದ ವಿಚಾರಣಾ ಪೀಠದ ನ್ಯಾಯಮೂರ್ತಿಗಳಾದ ಬಿ.ಎಸ್. ಚೌಹಾಣ್ ಮತ್ತು ಎ.ಕೆ.ಸಿಕ್ರಿ ಹೇಳಿದ್ದಾರೆ. ಕ್ರಿಮಿನಲ್ ಪ್ರಕರಣದ ವಿಚಾರಣೆಗಾಗಿ 10 ದಿನಗಳ ಕಾಲ ತಾತ್ಕಾಲಿಕ ತಡೆಯಾಜ್ಞೆ ನೀಡಲಾಗಿದೆ.
ಆದರೆ, ಇತರ ಸಿವಿಲ್ ಪ್ರಕರಣಗಳ ವಿಚಾರಣೆ ಎಂದಿನಂತೆ ನಡೆಯಲಿದೆ. ಅಕ್ರಮ ಆಸ್ತಿ ಪ್ರಕರಣದ ವಿಚಾರಣೆ ಜೂನ್ 6ರಿಂದ ಆರಂಭವಾಗಲಿದೆ ಎಂದು ಪೀಠ ಸ್ಪಷ್ಟಪಡಿಸಿದೆ.