ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಲ್ಲಿಕಟ್ಟು ಮಸೂದೆಗೆ ತಮಿಳುನಾಡು ವಿಧಾನಸಭೆ ಅಂಗೀಕಾರ

Published : 23 ಜನವರಿ 2017, 13:01 IST
ಫಾಲೋ ಮಾಡಿ
Comments

ಚೆನ್ನೈ: ಜಲ್ಲಿಕಟ್ಟು ಕ್ರೀಡೆ ಆಯೋಜನೆಗೆ ಇದ್ದ ತೊಡಕುಗಳನ್ನು ನಿವಾರಿಸುವ ಮಸೂದೆಯನ್ನು ತಮಿಳುನಾಡಿನ ವಿಧಾನಸಭೆಯಲ್ಲಿ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಲಾಯಿತು.

ಮುಖ್ಯಮಂತ್ರಿ ಪನ್ನೀರ್‌ಸೆಲ್ವಂ ಅವರು ಮಸೂದೆ ಮಂಡಿಸಿದರು. ಮಸೂದೆ ಮಂಡಿಸಿದ ಕೆಲವೇ ನಿಮಿಷಗಳಲ್ಲಿ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದರು ಎಂದು ಮೂಲಗಳು ತಿಳಿಸಿವೆ.

ಮಸೂದೆಗೆ ಕಾಂಗ್ರೆಸ್‌, ಡಿಎಂಕೆ ಹಾಗೂ ವಿರೋಧ ಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ.

ಜಲ್ಲಿಕಟ್ಟುಗೆ ಸುಗ್ರೀವಾಜ್ಞೆ ಹೊರಡಿಸಿದರೆ ಸಾಲದು, ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಇಂದು ಬೆಳಿಗ್ಗೆಯಿಂದ ಹಿಂಸಾರೂಪ ಪಡೆದುಕೊಂಡಿದ್ದು, ಪೊಲೀಸ್‌ಠಾಣೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಪೊಲೀಸರು ಮರೀನಾ ಬೀಚ್‌ನಿಂದ ಪ್ರತಿಭಟನಾನಿರತನ್ನು ತೆರವುಗೊಳಿಸಲು ಯತ್ನಿಸಿ, ಲಾಠಿ ಬೀಸಿದ ಪರಿಣಾಮ ವಿರೋಧ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಠಾಣೆಗೆ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ, ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT