ನವದೆಹಲಿ: ಮಹಮ್ಮದ್ ಅಲಿ ಜಿನ್ನಾ ಕುರಿತಂತೆ ವಿವಾದ ಹುಟ್ಟು ಹಾಕಿರುವ ಉತ್ತರ ಪ್ರದೇಶದ ಸಚಿವ ಬಿಜೆಪಿಯ ಸ್ವಾಮಿ ಪ್ರಸಾದ ಮೌರ್ಯ ಅವರ ವಿರುದ್ಧ ಪ್ರತಿಭಟನೆ ಕೈಗೊಂಡಿರುವ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ (ಎಎಮ್‌ಯು) ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಈ ವೇಳೆ ವಿಶ್ವವಿದ್ಯಾಲಯದ 28 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿವಿ ಮುಂಭಾಗದಲ್ಲಿ ಪ್ರತಿಭಟನೆ ಕೈಗೊಂಡಿರುವ ಎಎಮ್‌ಯು ವಿದ್ಯಾರ್ಥಿಗಳಿಗೆ ಜವಾಹರಲಾಲ್ ವಿಶ್ವವಿದ್ಯಾಲಯ, ಜಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ, ಅಲಹಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ.

ಉತ್ತರ ಪ್ರದೇಶದ ಸಚಿವ ಬಿಜೆಪಿಯ ಸ್ವಾಮಿ ಪ್ರಸಾದ ಮೌರ್ಯ ಅವರನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಒಳಪಡಿಸಬೇಕೆಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಎಎಮ್‌ಯು ವಿದ್ಯಾರ್ಥಿ ಘಟಕದ ಸದಸ್ಯ, ವಿಶ್ವವಿದ್ಯಾಲಯದ ಉಪಕುಲಪತಿಯವರನ್ನು ಭೇಟಿ ಮಾಡಿ ನಮ್ಮ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.