ನವದೆಹಲಿ (ಪಿಟಿಐ): ಇದೇ 19ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ನಂತರ ಡೀಸೆಲ್ ಬೆಲೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಆದರೆ, ಈ ಕುರಿತು ಇದುವರೆಗೂ ಸರ್ಕಾರ ಅಧಿಕೃತವಾಗಿ ಏನನ್ನೂ ಹೇಳಿಲ್ಲ.

ಡೀಸೆಲ್ ಮಾರಾಟದಿಂದ ಆಗುತ್ತಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಲು ಸರ್ಕಾರ ಅನಿವಾರ್ಯವಾಗಿ ಬೆಲೆ ಹೆಚ್ಚಿಸಲು ಮುಂದಾಗಿದೆ ಎಂದು ಇಂಧನ ಸಚಿವಾಲಯದ ಉನ್ನತ ಮೂಲಗಳು ತಿಳಿಸಿವೆ.

ಕಳೆದ ವರ್ಷ ಜೂನ್ 25ರ ನಂತರ ಡೀಸೆಲ್ ಬೆಲೆ ಹೆಚ್ಚಿಸದ ಕಾರಣ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಪ್ರತಿ ಲೀಟರ್ ಡೀಸೆಲ್ ಮಾರಾಟದಿಂದ ರೂ 10.33 ನಷ್ಟ ಅನುಭವಿಸುತ್ತಿವೆ. ಹೀಗಾಗಿ ಬೆಲೆ ಹೆಚ್ಚಳ ಅನಿರ್ವಾಯ ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ಬೆಲೆ ಹೆಚ್ಚಳ ನಿರ್ಧಾರ ಸರ್ಕಾರದ ಪರಿಶೀಲನೆಯಲ್ಲಿದ್ದು, ಎಂದು ಮತ್ತು ಎಷ್ಟು ಬೆಲೆ ಹೆಚ್ಚಳವಾಗಲಿದೆ ಎಂಬುದನ್ನು ನಿಖರವಾಗಿ ಹೇಳಲಾಗದು. ರಾಷ್ಟ್ರಪತಿ ಚುನಾವಣೆ ಬಳಿಕ ಪರಿಷ್ಕೃತ ದರಗಳು ಜಾರಿಗೆ ಬರಲಿವೆ ಎಂಬ ಬಗ್ಗೆಯೂ ನಿರ್ದಿಷ್ಟವಾಗಿ ಹೇಳಲಾಗದು ಎಂದು ಮೂಲಗಳು ತಿಳಿಸಿವೆ.

ಡೀಸೆಲ್ ಬೆಲೆಯನ್ನು ನಿರ್ಧರಿಸುವ ಅಥವಾ ಪರಿಷ್ಕರಿಸುವ ಅಧಿಕಾರವನ್ನು ಹೊಂದಿರುವ ಉನ್ನತಾಧಿಕಾರ ಸಚಿವರ ಸಮಿತಿ ಕಳೆದ ವರ್ಷ ಜೂನ್ 25ರ ನಂತರ ಮರಳಿ ಸಭೆ ಸೇರಿಲ್ಲ. ಸಮಿತಿಯ ಮುಖ್ಯಸ್ಥರಾಗಿದ್ದ ಹಣಕಾಸು ಸಚಿವ ಪ್ರಣವ್ ಮುಖರ್ಜಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಸಮಿತಿಯನ್ನು ಪುನರ್ ರಚಿಸಿಲ್ಲ. ಬೆಲೆ ಪರಿಷ್ಕರಣೆಗೆ ಈ ಸಮಿತಿ ಸಭೆ ಸೇರುವುದು ಕಡ್ಡಾಯವಾಗಿದ್ದು, ಮುಖರ್ಜಿ ಸ್ಥಾನವನ್ನು ಯಾರು ತುಂಬುತ್ತಾರೆ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ.

ಹೀಗಾಗಿ ಎಂದಿನಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ ಎಂಬುದನ್ನು ನಿರ್ದಿಷ್ಟವಾಗಿ ಹೇಳಲಾಗದು ಎನ್ನುತ್ತವೆ ಇಂಧನ ಸಚಿವಾಲಯದ ಮೂಲಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.