ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ ರಚಿಸದಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು ಮಂಗಳವಾರ ಇಡೀ ದಿನ ಉಪವಾಸ ಸತ್ಯಾಗ್ರಹ ನಡೆಸಿದರು.

ಪಳನಿಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಒ. ಪನ್ನೀರಸೆಲ್ವಂ ಅವರು ಚೆಪಾಕ್ ಸಮೀಪ ಸತ್ಯಾಗ್ರಹ ನಡೆಸಲು ನಿಗದಿಯಾಗಿದ್ದ ಸ್ಥಳಕ್ಕೆ ಬಂದಾಗ ಕಾರ್ಯಕರ್ತರಿಗೆ ಅಚ್ಚರಿಯಾಯಿತು. ಕಾರ್ಯಕ್ರಮ ಪಟ್ಟಿಯಲ್ಲಿ ಈ ಇಬ್ಬರು ನಾಯಕರ ಹೆಸರು ಇರಲಿಲ್ಲ.

ಮೀನುಗಾರಿಕಾ ಸಚಿವ ಡಿ. ಜಯಕುಮಾರ್, ಪಕ್ಷದ ಮುಖಂಡ ಇ. ಮಧುಸೂದನ್ ಅವರೂ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ಜಿಲ್ಲಾ ಕೇಂದ್ರಗಳಲ್ಲೂ ಏಕಕಾಲದಲ್ಲಿ ಪ್ರತಿಭಟನೆ ನಡೆಯಿತು. ಪಕ್ಷದ ಜಿಲ್ಲಾ ಮುಖಂಡರು ಹಾಗೂ ಸಚಿವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರತಿಭಟನೆ ಮೂರನೇ ದಿನಕ್ಕೆ: ‘ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ’ ಪಕ್ಷದ ನಾಯಕ ಟಿಟಿವಿ ದಿನಕರನ್ ನೇತೃತ್ವದಲ್ಲಿ ತಿರುಚಿನಾಪಳ್ಳಿ ವಿಮಾನ ನಿಲ್ದಾಣ ಸಮೀಪದಲ್ಲಿ ಪ್ರತಿಭಟನೆ ನಡೆಯಿತು. ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡಿನ ವಿರೋಧ ಪಕ್ಷಗಳು ಕರೆ ನೀಡಿದ್ದ ರಾಜ್ಯವ್ಯಾಪಿ ಪ್ರತಿಭಟನೆ ಮಂಗಳವಾರ ಮೂರನೇ ದಿನಕ್ಕೆ ಅಡಿಯಿರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.